ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಗಲಕೋಟೆ: ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಯಲ್ಲಿ ಎಲ್‌ಕೆಜಿಯಿಂದ 7ನೇ ತರಗತಿಯವರೆಗಿನ ಒಟ್ಟು 51 ಮಕ್ಕಳು ಬಿಸಿಯೂಟ ಮಾಡಿದ್ದು, ಅವರಲ್ಲಿ 14 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಊಟ ಮಾಡಿದ ಕೆಲವೇ ಸಮಯದ ಬಳಿಕ ಮಕ್ಕಳಿಗೆ ವಾಂತಿಯಾಗಿದ್ದು, ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ವಿದ್ಯಾರ್ಥಿಗಳನ್ನು ಮುಧೋಳದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.

ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಕಲಬುರಗಿಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪರಾದ ನಜೀಮಾ ಬೇಗಂ ಮತ್ತು ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಮ ಮಂದಿರ ಟ್ರಸ್ಟ್‌ಗೆ ಮೊದಲ CEO ನೇಮಕ; 'ಆಪರೇಷನ್ ಸಿಂಧೂರ್'​​ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ಹೆಸರು ಘೋಷಣೆ!

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು

Cricket: ಪಾಕ್ ಕ್ರಿಕೆಟ್‌ನಲ್ಲಿ ಬಿರುಗಾಳಿ; ಬರೊಬ್ಬರಿ 7 ಆಟಗಾರರ ಹೊರದಬ್ಬಿದ PCB, Imam-ul-Haqಗೆ ತನಿಖೆ ಸಂಕಷ್ಟ!

ರಾಮನಿಗಿಂತ ಸೀತೆಯೇ ಶ್ರೇಷ್ಠ; ಮಹಿಳಾ ನಾಯಕತ್ವಕ್ಕೆ ಬೆಂಬಲ: CM ಡಿಕೆ ಶಿವಕುಮಾರ್

Nepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ': ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಖಡಕ್ ಆಗ್ರಹ!