ಬಿ ವೈ ವಿಜಯೇಂದ್ರ  
ರಾಜ್ಯ

Bidadi township ಯೋಜನೆಗೆ ರೈತರ ವಿರೋಧ ಸ್ಪಷ್ಟ; ಯೋಜನೆ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ

ಮುಖ್ಯಮಂತ್ರಿಯವರ ಈ ಪ್ರವಾಸ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಅವರು ಈ ಪ್ರವಾಸದಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೇಳಲಿ. ಬಸವಕಲ್ಯಾಣಕ್ಕೆ ತೆರಳಿ ಅನುಭವ ಮಂಟಪ ವೀಕ್ಷಿಸಿದರು, ಛಾಯಾಚಿತ್ರ ತೆಗೆಸಿಕೊಂಡರು.

ಕಲಬುರಗಿ: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರ ಯೋಜನೆಯನ್ನು ಹಿಂಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸೋಮವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗೆ ರೈತರ ಆಕ್ರೋಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಬೇಕು. ಸಮೀಕ್ಷೆ ನಡೆಸಲು ತೆರಳಿದ್ದ ಅಧಿಕಾರಿಗಳ ವಾಹನಗಳನ್ನು ರೈತರು ಸುತ್ತುವರಿದು (ಘೇರಾವ್) ಪ್ರತಿಭಟನೆ ನಡೆಸಿದ್ದು, ಸಮೀಕ್ಷಾ ತಂಡವನ್ನು ಹಿಂದಕ್ಕೆ ಓಡಿಸಿರುವ ಘಟನೆ ರೈತರು ಈ ಯೋಜನೆಯನ್ನು ಸ್ಪಷ್ಟವಾಗಿ ವಿರೋಧಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇದ ವೇಳೆ ಬಿಡದಿಯಲ್ಲಿ ಟೌನ್‌ಶಿಪ್ ಹೆಸರಿನಲ್ಲಿ ಸರ್ಕಾರ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ ಅವರು, ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸವನ್ನೂ ವಿಜಯೇಂದ್ರ ಟೀಕಿಸಿದರು.

ಮುಖ್ಯಮಂತ್ರಿಯವರ ಈ ಪ್ರವಾಸ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಅವರು ಈ ಪ್ರವಾಸದಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೇಳಲಿ. ಬಸವಕಲ್ಯಾಣಕ್ಕೆ ತೆರಳಿ ಅನುಭವ ಮಂಟಪ ವೀಕ್ಷಿಸಿದರು, ಛಾಯಾಚಿತ್ರ ತೆಗೆಸಿಕೊಂಡರು, ಬೀದರ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೇವಲ ಪ್ರದರ್ಶನಕ್ಕಾಗಿ ಕಾರ್ಯಕ್ರಮ ನಡೆಸಿ ಬೆಂಗಳೂರಿಗೆ ಹಿಂತಿರುಗಿದ್ದಾರೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!