ಜಿ.ಸಿ ಚಂದ್ರಶೇಖರ್  
ರಾಜ್ಯ

ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ನೇಮಕ

ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡಲು ತಕ್ಷಣದಿಂದ ಜಾರಿಗೆ ಬರುವಂತೆ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡಲು ತಕ್ಷಣದಿಂದ ಜಾರಿಗೆ ಬರುವಂತೆ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಜಿ.ಸಿ. ಚಂದ್ರಶೇಖರ್ ಅವರು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿದ್ದಾರೆ. ಅವರು ಮೂಲತಃ ಹಾಸನದವರು. ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಪಕ್ಷದ ವ್ಯಕ್ತಿಯೆಂದೇ ಗುರುತಿಸಿಕೊಂಡಿದ್ದಾರೆ. ಬೇರೆ ಅಧಿಕಾರದ ಹುದ್ದೆಗಳಿಗಿಂತ, ಪಕ್ಷದ ಕೆಲಸಗಳಿಗಾಗಿ ಹೆಚ್ಚು ದುಡಿದವರು. ಜಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರ ಪಕ್ಷ ನಿಷ್ಠೆಯ ಕಾರಣಕ್ಕಾಗಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಯೂ ನೇಮಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ, 2 ದಿನಗಳಲ್ಲಿ ಸ್ಪಷ್ಟ ಚಿತ್ರಣ

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್; 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!