ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್  
ರಾಜ್ಯ

'ರೈತರ ಆಕ್ರೋಶ ಕಟ್ಟೆಯೊಡೆಯುವ ಮುನ್ನ ಕಾವೇರಿ ನೀರು ಬಿಡುಗಡೆ ಮಾಡಿ': ರಾಜ್ಯ ಸರ್ಕಾರಕ್ಕೆ HDK ಆಗ್ರಹ

ಮಂಡ್ಯ ಜಿಲ್ಲೆಯ ರೈತರು ಬೆಳೆ ಉಳಿಸಿಕೊಳ್ಳಲು ಕಾವೇರಿ ನೀರಿನ ನಿರೀಕ್ಷೆಯಲ್ಲಿದ್ದು, ಕೂಡಲೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರಿಗೆ ಕಳೆದ ಒಂದು ತಿಂಗಳಿನಿಂದಲೂ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ರೈತರ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.

"ಒಂದು ತಿಂಗಳಿನಿಂದ ಬೆಳೆಗಳಿಗೆ ನೀರು ಕೊಡಿ ಎಂದು ಮಂಡ್ಯ ರೈತರು ಅಂಗಲಾಚುತ್ತಿದ್ದರೂ ಈ ಸರ್ಕಾರದ ಕಿವಿಗೆ ಜಾಣಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ ತೋರುವ ಸರ್ಕಾರಕ್ಕೆ ಅವರ ಬೆಳೆ ಉಳಿಸಲು ಏಕೆ ನಿರುತ್ಸಾಹವೋ ಅರ್ಥವಾಗುತ್ತಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ರೈತರು ಬೆಳೆ ಉಳಿಸಿಕೊಳ್ಳಲು ಕಾವೇರಿ ನೀರಿನ ನಿರೀಕ್ಷೆಯಲ್ಲಿದ್ದು, ಕೂಡಲೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

"ಮಂಡ್ಯ ರೈತರ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ತಕ್ಷಣವೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಬೇಕು. ರೈತರ ಆಕ್ರೋಶ ಕಟ್ಟೆಯೊಡೆಯುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ನೀರು ಬಿಡುಗಡೆ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ, 2 ದಿನಗಳಲ್ಲಿ ಸ್ಪಷ್ಟ ಚಿತ್ರಣ

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್; 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!