ಗೃಹ ಸಚಿವ ಡಾ. ಜಿ. ಪರಮೇಶ್ವರ್ 
ರಾಜ್ಯ

ಶಾಂತಿಯುತ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ ಆದರೆ, ಪೊರಕೆಯಿಂದ ಹಲ್ಲೆ, ಕಲ್ಲು ತೂರಾಟ ಒಪ್ಪಲ್ಲ: ಸಚಿವ ಪರಮೇಶ್ವರ್

ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ಮತ್ತು ಅದಕ್ಕೆ ಸರ್ಕಾರದ ವಿರೋಧವಿಲ್ಲ. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದರು.

ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ಮತ್ತು ಅದಕ್ಕೆ ಸರ್ಕಾರದ ವಿರೋಧವಿಲ್ಲ ಎಂದು ಹೇಳಿದ್ದಾರೆ. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಇಂತಹ ಘಟನೆಗಳ ವಿರುದ್ಧ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ವೇ ಅಧಿಕಾರಿಯೊಬ್ಬರ ಮೇಲೆ ಪೊರಕೆಯಿಂದ ಹಲ್ಲೆ ನಡೆಸಲಾಗಿದೆ. ಕಲ್ಲು ತೂರಾಟವೂ ನಡೆದಿದೆ. ಈ ಸಂಬಂಧ ರೈತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವುದು ನಮಗೂ ಗೊತ್ತಿದೆ. ಕಾನೂನುಬದ್ಧವಾಗಿ ಜನರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಯಾರೂ ಅದನ್ನು ವಿರೋಧಿಸುವುದಿಲ್ಲ. ಆದರೆ, ರಾಜಕೀಯ ಕಾರಣಗಳಿಂದ ಅಥವಾ ರಾಜಕೀಯ ಒತ್ತಡದ ಮೇರೆಗೆ ಪ್ರತಿಭಟನೆ ನಡೆಸಿ ಹಿಂಸಾಚಾರಕ್ಕೆ ಮುಂದಾದರೆ, ಸರ್ಕಾರ ಅಗತ್ಯವಿರುವ ಕಾನೂನು ಕ್ರಮವನ್ನು ಖಂಡಿತ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ, ಶೀಘ್ರದಲ್ಲೇ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಆದರೆ, ಸಚಿವ ಸಂಪುಟ ವಿಸ್ತರಣೆ ಇನ್ನೂ ಆಗಿಲ್ಲ. ರಾಜ್ಯದಾದ್ಯಂತ ಕೆಲವು ರಾಜಕೀಯ ಬೆಳವಣಿಗೆಗಳು ನಡೆಯಬಹುದು. ಅವೆಲ್ಲವನ್ನೂ ನಾವು ಸಮರ್ಥವಾಗಿ ಎದುರಿಸುತ್ತೇವೆ" ಎಂದು ತಿಳಿಸಿದರು.

ಸಚಿವ ಸಂಪುಟದಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ಪ್ರತಿಕ್ರಿಯಿಸಿ, "ಸಂಪುಟದಲ್ಲಿ ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಕುರಿತು ಪಕ್ಷದ ಹೈಕಮಾಂಡ್ ಈಗಾಗಲೇ ಚರ್ಚೆ ನಡೆಸುತ್ತಿದೆ. ರಾಹುಲ್ ಗಾಂಧಿ ಕೂಡ ವಿದೇಶ ಪ್ರವಾಸದಿಂದ ಮರಳಿದ್ದಾರೆ. ಹೀಗಾಗಿ ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!