ಕಾಮಗಾರಿಗಳು ಮತ್ತು ಸಾರ್ವಜನಿಕ ಸಮಸ್ಯೆಗಳ ಪರಿಶೀಲಿಸಿದ ಮುಖ್ಯ ಆಯುಕ್ತ ಮಹೇಶ್ವರ್ ರಾವ್. 
ರಾಜ್ಯ

Chamarajpet ಹಿಂದೂ ರುದ್ರಭೂಮಿ ನವೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ

ಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.

ಬೆಂಗಳೂರು: ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಹಾಗೂ ಮಾಜಿ ಬಿಬಿಎಂಪಿ ಮೇಯರ್ ಹುಚ್ಚಪ್ಪ ಅವರೊಂದಿಗೆ ಬೆಂಗಳೂರು ಕೇಂದ್ರ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಚಾಮರಾಜಪೇಟೆ ಮತ್ತು ಬಸವನಗುಡಿ ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಯಾವುದೇ ವಿಳಂಬವಿಲ್ಲದೆ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.

ಪರಿಶೀಲನೆ ವೇಳೆ ಚಾಮರಾಜಪೇಟೆ 8ನೇ ಮುಖ್ಯರಸ್ತೆ ಹಾಗೂ ಆಜಾದ್ ನಗರ ಮುಳಕಟ್ಟಮ್ಮ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ಅಕ್ರಮವಾಗಿ ನಿಲ್ಲಿಸಿರುವುದು ಕಂಡುಬಂದಿದ್ದು, ಇದರಿಂದ ಸಂಚಾರ ದಟ್ಟಣೆ ಉಂಟಾಗುವುದರ ಜೊತೆಗೆ ರುದ್ರಭೂಮಿಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತಕ್ಷಣವೇ ಅಕ್ರಮವಾಗಿ ನಿಲುಗಡೆ ಮಾಡಿರುವ ವಾಹನಗಳನ್ನು ತೆರವುಗೊಳಿಸುವಂತೆ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರಿಗೆ ಸೂಚಿಸಿದರು.

ಅಲ್ಲದೆ, ಸಮಾನ ಅಗಲವಿಲ್ಲದ ಆಜಾದ್ ನಗರ ಮುಳಕಟ್ಟಮ್ಮ ರಸ್ತೆಯನ್ನು ಅಗಲೀಕರಣಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆಯೂ ಸಲಹೆ ನೀಡಿದರು.

ರಾಜೀವ್ ಗಾಂಧಿ ಕ್ರೀಡಾಂಗಣದ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಕ್ರೀಡಾಂಗಣದ ಸಮರ್ಪಕ ನಿರ್ವಹಣೆಗಾಗಿ ಖಾಸಗಿ ಸಂಸ್ಥೆಯನ್ನು ನೇಮಿಸಲು ಟೆಂಡರ್ ಆಹ್ವಾನಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ರಾಜಕಾಲುವೆಯಲ್ಲಿ ಕಸ ಸಂಗ್ರಹವಾಗಿ ನೀರಿನ ಹರಿವಿಗೆ ಅಡ್ಡಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣ ಕಸ ತೆರವುಗೊಳಿಸಿ, ಕಾಲುವೆಯನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳದಲ್ಲಿ ಮತ್ತೊಂದು ಪವಾಡ, 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೇರಿಕೆ

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!

'ಅಸಹ್ಯಕರ', ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!