ಕರ್ನಾಟಕ ಬಾವುಟ 
ರಾಜ್ಯ

ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?

ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ

ಬೆಂಗಳೂರು: ಬೆಂಗಳೂರು: ಕವಿ ಕುವೆಂಪು ವಿರಚಿತ ನಾಡಗೀತೆಯಲ್ಲಿ 'ಬೌದ್ಧ' ಪದ ಮರು ಸೇರ್ಪಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ. ರಾಷ್ಟ್ರಕವಿ ಕುವೆಂಪು ಅವರು 1924ರಲ್ಲಿ ಬರೆದಿದ್ದ ನಾಡಗೀತೆಯ ಮೊದಲ ಕರಡು ಪ್ರತಿಯಲ್ಲಿ ‘ಬೌದ್ಧರುದ್ಯಾನ’ ಎಂಬ ಪದವಿತ್ತು.

ಆದರೆ, 1930ರಲ್ಲಿ ಅವರ ‘ಕೊಳಲು’ ಕವನ ಸಂಕಲನದಲ್ಲಿ ಈ ಹಾಡು ಪ್ರಕಟವಾದಾಗ ಅದು ‘ಜೈನರುದ್ಯಾನ’ ಎಂದಾಗಿತ್ತು. ಬೌದ್ಧ ಧರ್ಮಕ್ಕೆ ಇರುವ ಐತಿಹಾಸಿಕ ಮಹತ್ವವನ್ನು ಪರಿಗಣಿಸಿ, ನಾಡಗೀತೆಯಲ್ಲಿ ಮತ್ತೆ ಬೌದ್ಧ ಪದವನ್ನು ಸೇರಿಸಬೇಕು ಎಂದು ಕೋರಿ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರು 2025ರ ನವೆಂಬರ್‌ನಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಈ ಪತ್ರದ ಹಿನ್ನೆಲೆಯಲ್ಲಿ ಅಂದಿನ ಸಿಎಂರ ಸೂಚನೆಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 8 ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ಒಪ್ಪಂದಕ್ಕೆ Good Bye; 'Hormuz ಮೇಲಿನ ಸಂಪೂರ್ಣ ನಿಯಂತ್ರಣ ನಮ್ಮದೇ' ಎಂದ ಇರಾನ್

ಒಪ್ಪಂದಕ್ಕೆ ಬಾರದಿದದರೆ ವಿದ್ಯುತ್ ಸ್ಥಾವರ-ಸೇತುವೆಗಳೇ ಗುರಿ, ಸಾಕು ಎನ್ನುವವರೆಗೂ ದಾಳಿ: Iranಗೆ Trump ಖಡಕ್ ಎಚ್ಚರಿಕೆ

ಸಚಿವ ಸಂಪುಟ ಕಸರತ್ತು: ರಾಹುಲ್ ಭೇಟಿಗೆ ಡಿಕೆಶಿ-ಸಿದ್ದು ದೆಹಲಿ ಪ್ರಯಾಣ, ಸಚಿವಾಕಾಂಕ್ಷಿಗಳಿಗಿದು ನಿರ್ಣಾಯಕ ವಾರ..!

ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಸ್ಮರಣಾರ್ಥ ಹೊಸ ಯೋಜನೆ: 'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ. ಅನುದಾನ..!

ಏಳು ತಲೆಮಾರುಗಳ ಪಿತೃಗಳಿಗೆ ಮೋಕ್ಷ: ಗಯಾ ಶ್ರಾದ್ಧ ಮಹಿಮೆ ಏನು; ಗಯಾದಲ್ಲೇ ಏಕೆ ಪಿಂಡ ಪ್ರಧಾನ ಮಾಡಬೇಕು?