ವಿಧಾನಸೌಧ online desk
ರಾಜ್ಯ

ಶಕ್ತಿ ಕೇಂದ್ರ ವಿಧಾನಸೌಧಕ್ಕೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶ

ಇದೀಗ ಬರಗಾಲದ ಬಿಸಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಯಾವ ದಿಕ್ಕಿಗೆ ಹೋದರೂ ನೀರಿಲ್ಲ. ಕಳೆದ ವಾರ ಅಲ್ಪ ಸ್ವಲ್ಪ ಮಳೆಯಾದರೂ ಯಾವುದೇ ಜಲಾಶಯಗಳು ತುಂಬುವಷ್ಟು ಒಳ ಹರಿವು ಬಂದಿಲ್ಲ.

ಇದೀಗ ಬರಗಾಲದ ಬಿಸಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ಪ್ರಸ್ತುತ ಹವಾಮಾನ ವೈಪರೀತ್ಯದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ನೀರಿನಂತಹ ಅತ್ಯಮೂಲ್ಯ ಸಂಪನ್ಮೂಲಗಳನ್ನು ಅಪವ್ಯಯ ಮಾಡದೆ ಮಿತವಾಗಿ ಬಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಆದೇಶವನ್ನು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.

ಸಚಿವಾಲಯದಲ್ಲಿ ವಿದ್ಯುತ್‌ನ್ನು ಮಿತವಾಗಿ ಬಳಸುವ ಕುರಿತು ಆಗಾಗ್ಗೆ ಅನೇಕ ಸುತ್ತೋಲೆಗಳ ಮೂಲಕ ಹಲವಾರು ಬಾರಿ ಸೂಚನೆಗಳನ್ನು ನೀಡಲಾಗಿದೆ. ಆದರೂ, ಸಹ ಸಚಿವಾಲಯದ ಕಚೇರಿಗಳಲ್ಲಿ ವಿದ್ಯುತ್ತಿನ ಬಳಕೆಯಲ್ಲಿ ನಿಯಂತ್ರಣವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿದ್ಯುತ್ ನವೀಕರಿಸಲಾಗದಂತಹ ಅತ್ಯಂತ ಮಹತ್ವದ ನೈಸರ್ಗಿಕ ಸಂಪನ್ಮೂಲವಾಗಿರುವುದರಿಂದ ವಿದ್ಯುತ್‌ನ್ನು ಸ್ವೇಚ್ಛಾ ಮನೋಭಾವದಿಂದ ಬಳಸುವುದು ಸರಿಯಾದ ಕ್ರಮವಾಗಿರುವುದಿಲ್ಲ. ಇಂತಹ ಅಮೂಲ್ಯವಾದ ವಿದ್ಯುತ್‌ನ್ನು ವ್ಯಯ ಮಾಡದೇ ಮಿತವಾಗಿ ಬಳಸುವುದು ಮತ್ತು ಅನಗತ್ಯ ಬಳಕೆಯನ್ನು ತಡೆಗಟ್ಟುವುದರ ಮೂಲಕ ವಿದ್ಯುತ್ ಉಳಿತಾಯ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಈ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

ಪಶ್ಚಿಮ ಬಂಗಾಳ ಪ್ರವೇಶಿಸಲು ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಸಹಾಯ: ಭಾರತೀಯ ಯೋಧನ ಬಂಧನ