ಎಚ್.ಡಿ ದೇವೇಗೌಡ ಜೊತೆಗೆ ಕುಮಾರಸ್ವಾಮಿ ಮತ್ತು ನಿಖಿಲ್ 
ರಾಜ್ಯ

'ದೇವೇಗೌಡರೇ.. ಪುತ್ರ ವ್ಯಾಮೋಹ ಬಿಡಿ; ಕುಮಾರಸ್ವಾಮಿ, ನಿಖಿಲ್ ಮೆಚ್ಚಿಸಲು ಧರಣಿ ಕೂರಬೇಡಿ; ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನ ಕೊಡಿ'

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರ ಪರವಾಗಿ ಧರಣಿ ನಡೆಸುವ ಬದಲು ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು: ಬಿಡದಿ ಟೌನ್ ಶಿಪ್ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಧರಣಿ ಕೂರುವುದು ಬೇಡ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರ ಪರವಾಗಿ ಧರಣಿ ನಡೆಸುವ ಬದಲು ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ.

ದೇವೇಗೌಡರು ಪ್ರಧಾನಿ ಮೋದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹಾಗಿದ್ದರೆ ಮೇಕೆದಾಟು ಮತ್ತು ಮಹದಾಯಿ ಯೋಜನೆಗಳ ಕುರಿತು ಕೇಂದ್ರದ ಮೇಲೆ ಒತ್ತಡ ಏಕೆ ತರುತ್ತಿಲ್ಲ? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಬೇಕಲ್ಲವೇ ಎಂದು ಪ್ರಶ್ನಿಸಿದರು.

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನಹರಿಸಬೇಕು, ಕುಮಾರಸ್ವಾಮಿ, ಮತ್ತು ನಿಖಿಲ್ ಅವರನ್ನು ಮೆಚ್ಚಿಸಲು ಧರಣಿ ಕೂರಬೇಡಿ ಎಂದು ಸಲಹೆ ನೀಡಿದರು.

ಬಿಡದಿ ಪ್ರತಿಭಟನೆ ವೇಳೆ ರೈತರ ಮೇಲೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಾತ್ರ ಪ್ರಕರಣ ದಾಖಲಾಗಿದೆ. ಅಧಿಕಾರಿಗಳು ನೀಡಿರುವ ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕುಮಾರಸ್ವಾಮಿ ಪೊರಕೆ, ಚಪ್ಪಲಿ ಹಿಡಿದುಕೊಂಡು ಬಂದಿದ್ದರೆ ಅವರ ಮೇಲೂ ಕೇಸ್ ಆಗುತ್ತಿತ್ತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!