ಬೆಂಗಳೂರು: ಬಿಡದಿ ಟೌನ್ ಶಿಪ್ ವಿಚಾರಕ್ಕೆ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವಿನ ಟೀಕೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ವೈಯಕ್ತಿವಾಗಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.
ಬಿಡದಿ ಟೌನ್ ಶಿಪ್ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಬಾಲಕೃಷ್ಣ ಸಿಎಂ ಡಿಕೆ ಶಿವಕುಮಾರ್ ಮೇಲೆ ಭಷ್ಟ್ರಾಚಾರ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಡಿಎಲ್ಎಫ್ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿಬಂದಿದೆ.
ಕುಮಾರಸ್ವಾಮಿ ಅವರು ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದ್ದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು ಕುಮಾರಸ್ವಾಮಿ ಅವರೇ ಹೇಳಬೇಕು ಎಂದು ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿ ಅವರು ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಸಭೆ ಮಾಡಲಿಲ್ಲ. ಶಿವಕುಮಾರ್ ಅವರು ಕಿಕ್ ಬ್ಯಾಕ್ ಪಡೆದು ಕೇಂದ್ರದ ನಾಯಕರಿಗೆ ಕಳುಹಿಸುತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅನೇಕ ಬಾರಿ ಆರೋಪಿಸಿದ್ದಾರೆ.
ಡಿಎಲ್ಎಫ್ ಗೆ ಜಾಗತಿಕ ಟೆಂಡರ್ ನೀಡುವಾಗ ಕುಮಾರಸ್ವಾಮಿ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು? ಡಿಎಲ್ಎಫ್ ಅವರು ಕೊಟ್ಟ ಹಣವನ್ನು ಹಿಂತಿರುಗಿಸಲು ಸಾಧ್ಯವಿಲ್ಲ. ಆದರೆ ಜಾಗತಿಕ ಮುಗ್ಗಟ್ಟಿನಲ್ಲಿ ಈ ಯೋಜನೆ ಮಾಡುವುದು ಅಸಾಧ್ಯ ಎಂದು ಡಿಎಲ್ಎಫ್ ಹಿಂದಕ್ಕೆ ಸರಿದಾಗ ಇವರು 400 ಕೋಟಿ ಹಣ ವಾಪಸ್ ನೀಡಿದಾಗ ಯಡಿಯೂರಪ್ಪನವರು ಎಷ್ಟು ಕಿಕ್ ಬ್ಯಾಕ್ ಪಡೆದರು? ಅದರಲ್ಲಿ ಅವರ ಕೇಂದ್ರದ ನಾಯಕರಿಗೆ ಎಷ್ಟು ಪಾಲು ನೀಡಿದರು?” ಎಂದು ಪ್ರಶ್ನಿಸಿದರು.
“2019ರಲ್ಲಿ ಯಡಿಯೂರಪ್ಪನವರ ಸರ್ಕಾರ ಅಧಿಕಾರಕ್ಕೆ ಬಂದಾಗ ಕೆಐಎಡಿಬಿಗೆ 1 ಸಾವಿರ ಎಕರೆ ಟೌನ್ ಶಿಪ್ ಭೂಮಿಯನ್ನು ಹಸ್ತಾಂತರ ಮಾಡಿದರು. ಆಗ ಕೈಗಾರಿಕಾ ಸಚಿವರಾಗಿದ್ದವರು ಜಗದೀಶ್ ಶೆಟ್ಟರ್ ಅವರು. ಈ ಸಂದರ್ಭದಲ್ಲಿ ಕಿಕ್ ಬ್ಯಾಕ್ ಪಡೆದು ಈ ಭೂಮಿಯನ್ನು ಕೆಐಎಡಿಬಿಗೆ ನೀಡಿದ್ದಾರೆ ಎಂದು ಇದೇ ಕುಮಾರಸ್ವಾಮಿ ಅವರು ಆರೋಪಿಸಿದ್ದರು. ಹೀಗಾಗಿ ಬಿಜೆಪಿ ನಾಯಕರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು ಅವರೇ ಹೇಳಬೇಕು ಎಂದು ಸವಾಲು ಹಾಕಿದ್ದಾರೆ.
ನಾಲ್ಕೈದು ವರ್ಷಗಳ ಹಿಂದೆ ಕೇವಲ 80 ಲಕ್ಷದಿಂದ 1 ಕೋಟಿವರೆಗೆ ಭೂಮಿ ಪಡೆದಿದ್ದರು. ಈಗ ನಮ್ಮ ಸರ್ಕಾರ 2.50 ಕೋಟಿವರೆಗೂ ಪರಿಹಾರ ನೀಡುತ್ತಿದೆ. ಆ ಸಂದರ್ಭದಲ್ಲಿ ನಾನು ಮಾಜಿ ಶಾಸಕನಾಗಿ ಸ್ಥಳಕ್ಕೆ ಹೋಗಿ ಹೋರಾಟ ಮಾಡಿದೆ. ಈ ಭಾಗವನ್ನು ಕೆಂಪು ವಲಯದಿಂದ ಮುಕ್ತಿಗೊಳಿಸಿ ಎಂದು ಮನವಿ ಮಾಡಿದೆ ಎಂದು ಯಡಿಯೂರಪ್ಪನವರ ಬಳಿ ನಿಯೋಗ ತೆಗೆದುಕೊಂಡು ಹೋಗಿ ಮನವಿ ನೀಡಿದ್ದೆ ಎಂದು ತಿಳಿಸಿದರು.
ನಮ್ಮ ಪಾಪದ ಕೂಸನ್ನು ಯಾಕೆ ಎತ್ತಿ ಕೊಂಡು ತಿರುಗುತ್ತಿದ್ದೀರಿ ಎಂದು ನಿಖಿಲ್ ಪ್ರಶ್ನಿಸಿದ್ದಾರೆ, ಆದರೆ ಪಾಪದ ಕೂಸು ವಿಕಲ ಚೇತನ ಪರಿಸ್ಥಿತಿಯಲ್ಲಿದೆ, ಕುಮಾರಸ್ವಾಮಿ ಅದರ ಕೈಕಾಲು ಮುರಿದಿದ್ದಾರೆ. ಆ ಪಾಪದ ಕೂಸನ್ನು ಮೊದಲು ಎತ್ತಿಕೊಂಡವರು ಯಡಿಯೂರಪ್ಪ, ನಂತರ ಸದಾನಂದಗೌಡ. ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಎತ್ತಿಕೊಂಡ್ರು. ಈಗ ಕಡೆಯದಾಗಿ ಆ ಕೂಸಿಗೆ ಚಿಕಿತ್ಸೆ ಕೊಡಲು ನಾವು ಹೊತ್ತುಕೊಂಡಿದ್ದೇವೆ ಎಂದು ಬಾಲಕೃಷ್ಣ ಹೇಳಿದ್ದಾರೆ. ಇನ್ನೂ ಬಿಡದಿ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ ಅದು ಪಾದಯಾತ್ರೆಯಲ್ಲ ಪ್ರಾಯಶ್ಚಿತ್ತ ಯಾತ್ರೆ ಎಂದು ಲೇವಡಿ ಮಾಡಿದ್ದಾರೆ.