ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ ರಾವ್ 
ರಾಜ್ಯ

ಅಗ್ನಿ ಸುರಕ್ಷತಾ ವ್ಯವಸ್ಥೆಗಳಿಲ್ಲದ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ: GBA ಮುಖ್ಯಸ್ಥ

BWSSB ಕೈಗೊಳ್ಳುವ ಕಾಮಗಾರಿಗಳು ಹಾಗೂ ರಸ್ತೆ ದುರಸ್ತಿ ಕಾರ್ಯಗಳು ಹಲವು ಬಾರಿ ಸಮರ್ಪಕವಾಗಿ ನಡೆಯದಿರುವುದರಿಂದ ಜಿಬಿಎ (GBA) ಟೀಕೆಗೆ ಗುರಿಯಾಗುತ್ತಿದೆ ಎಂದು ರಾವ್ ಗಮನಸೆಳೆದರು.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿರುವ ಅಪಾಯ ಸಾಧ್ಯತೆಯಿರುವ ಪ್ರದೇಶಗಳಲ್ಲಿ, ಕಡ್ಡಾಯ ಅಗ್ನಿ ಸುರಕ್ಷತಾ ವ್ಯವಸ್ಥೆಗಳನ್ನು ಹೊಂದಿರದ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ (GBA) ಅಡಿಯಲ್ಲಿನ ವಿವಿಧ ಇಲಾಖೆಗಳ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತಾ ಪರಿಶೀಲನೆಗಳನ್ನು (ಆಡಿಟ್) ನಡೆಸುವಂತೆ ಸೂಚಿಸಿದರು. ಅಗತ್ಯವಿರುವ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಲ್ಪಿಸಲು ವಿಫಲವಾಗುವ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

'ಅಗ್ನಿಶಾಮಕ ತುರ್ತು ಸಂದರ್ಭಗಳಲ್ಲಿ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ದುರ್ಬಲ ಪ್ರದೇಶಗಳಲ್ಲಿ ಹೊಸದಾಗಿ ನಿರ್ಮಿಸಲಾದ ವೈಟ್-ಟಾಪಿಂಗ್ ರಸ್ತೆಗಳಲ್ಲಿ ಅಗ್ನಿಶಾಮಕ ಹೈಡ್ರಂಟ್‌ಗಳನ್ನು ಅಳವಡಿಸಿ. ಸ್ಥಾಪಿಸಲಾದ ಹೈಡ್ರಂಟ್‌ಗಳನ್ನು ಪ್ರತಿ ತಿಂಗಳು ಸರಿಯಾಗಿ ನಿರ್ವಹಿಸಬೇಕು ಮತ್ತು ಪರಿಶೀಲಿಸಬೇಕು. ಯಾವುದೇ ದೋಷಗಳನ್ನು ತಕ್ಷಣವೇ ಸರಿಪಡಿಸಬೇಕು' ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೈಗೊಳ್ಳುವ ಕಾಮಗಾರಿಗಳು ಹಾಗೂ ರಸ್ತೆ ದುರಸ್ತಿ ಕಾರ್ಯಗಳು ಹಲವು ಬಾರಿ ಸಮರ್ಪಕವಾಗಿ ನಡೆಯದಿರುವುದರಿಂದ ಜಿಬಿಎ (GBA) ಟೀಕೆಗೆ ಗುರಿಯಾಗುತ್ತಿದೆ ಎಂದು ರಾವ್ ಗಮನಸೆಳೆದರು.

'ಪ್ರತಿ BWSSB ಕಾಮಗಾರಿ ನಡೆಯುವ ಸ್ಥಳದಲ್ಲಿಯೂ ಯೋಜನೆಯ ವಿವರಗಳನ್ನು ಒಳಗೊಂಡ ನಾಮಫಲಕವನ್ನು ಅಳವಡಿಸಬೇಕು. ರಸ್ತೆ ಅಗೆಯುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದನ್ನು ಹಾಗೂ ರಸ್ತೆ ದುರಸ್ತಿಯನ್ನು ಉತ್ತಮ ಗುಣಮಟ್ಟದ ಮಾನದಂಡಗಳೊಂದಿಗೆ ಕೈಗೊಳ್ಳುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ

ಭಾರತದಲ್ಲಿ ಯೂಟ್ಯೂಬರ್, ಕಂಟೆಂಟ್‌ ಕ್ರಿಯೇಟರ್ಸ್‌ ಹಾವಳಿ: ದೊಡ್ಡ ಪ್ರಮಾಣದಲ್ಲಿ ಆದಾಯ ಬರ್ತಿದೆಯಾ? ಹೇಗೆಲ್ಲಾ ದುಡ್ಡು ಮಾಡಬಹುದು ಗೊತ್ತಾ?