ಪ್ರಿನ್ಸಿಪಾಲ್ ನಾಮದೇವ 
ರಾಜ್ಯ

ಶಿವಮೊಗ್ಗ: ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಗೆ ಡ್ರಮ್‌ ಸೆಟ್ ಬೇಕು ಎಂಬ ನೆಪದಲ್ಲಿ ಪ್ರಿನ್ಸಿಪಾಲ್ ಲಂಚ ಕೇಳಿದ್ದು, ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇಂದು ಬೆಳಗ್ಗೆ 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್‌ ರುದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಮೀರಾಬಾಯಿ ಚಾನುಗೆ ಬೆಳ್ಳಿ ಪದಕ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

ಕೊನೆಗೂ ಭಾರತವೇ ಬೇಕಾಯ್ತು: Iran ಸಮಸ್ಯೆಗೆ IMEEC ಒಂದೇ ಪರಿಹಾರ- Donald Trump

ಭೀಕರ ಅಪಘಾತ; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video

ಜಪಾನ್ ವಿರುದ್ಧ ಗೋಲ್ಡನ್ ಡಕ್; Unwanted Record ಸೃಷ್ಟಿಸಿದ ಅಭಿಷೇಕ್ ಶರ್ಮಾ: ಈ ದಾಖಲೆ ಮುರಿಯುವುದು ಯಾರಿಗೂ ಅಸಾಧ್ಯ!