ಬಿ.ಕೆ ಹರಿಪ್ರಸಾದ್ 
ರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ: 'ಬಿಜೆಪಿಗರ ಮಕ್ಕಳಿಗೆ ಲಾಭ'; ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಬಿ.ಕೆ ಹರಿಪ್ರಸಾದ್ ಒತ್ತಾಯ

ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯ ಫಲಾನುಭವಿಗಳು ಬಿಜೆಪಿ ನಾಯಕರ ಮಕ್ಕಳೇ ಆಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.

ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲೇ ಈ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದ್ದು, ಇದರ ಫಲಾನುಭವಿಗಳು ಬಿಜೆಪಿ ನಾಯಕರ ಮಕ್ಕಳಾಗಿದ್ದಾರೆ. ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇದು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಮಾತ್ರವಲ್ಲ. ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಾರ್ಹತೆ ಪ್ರಶ್ನೆಯಾಗಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆದಿದ್ದು, ರಾಜ್ಯದಲ್ಲೂ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರನ್ನೂ ಆಹ್ವಾನಿಸಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಗೂ ಬಿಜೆಪಿಗೂ ಇರುವ ಸಂಬಂಧವೇನು? ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದ್ದರೆ ಮತ್ತೊಂದೆಡೆ ಪ್ರಧಾನ ಮಂತ್ರಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಮಾಡುತ್ತಾರೆ. ನಕಲಿ ಪದವಿ ಪ್ರಮಾಣಪತ್ರ ಇಟ್ಟುಕೊಂಡಿರುವ ಪ್ರಧಾನಮಂತ್ರಿಗಳು ಮಕ್ಕಳ ಭವಿಷ್ಯ ಅಪಾಯಕ್ಕೆ ಸಿಲುಕಿಸಿದ್ದಾರೆ ಎಂದು ದೂರಿದರು.

2014ರಿಂದ 2026ರವರೆಗೆ 152 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಉತ್ತರ ಭಾರದ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಆತಂತಕಕ್ಕೆ ಸಿಲುಕಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗಂಭೀರವಾದ ತನಿಖೆ ನಡೆಯಬೇಕು. ಎಲ್ಲ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ರಾಷ್ಟ್ರೀಯ ತನಿಖೆ ಆಗಬೇಕು. ಇದರಲ್ಲಿ ಯಾವುದೇ ರಾಜಕೀಯ ಇರಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು, ಭಾರತ ತೀವ್ರ ಖಂಡನೆ!

CJP Protest LIVE Updates | ಸಂಸತ್ತಿನಲ್ಲೂ ಮಾರ್ಧನಿಸಿದ CJP ಪ್ರತಿಭಟನೆ, ಉಭಯ ಸದನಗಳ ಕಲಾಪ ಮುಂದೂಡಿಕೆ, Abhijeet Dipke ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್

ಫುಟ್‌ಬಾಲ್ ವಿಶ್ವಕಪ್ ಫೈನಲ್ ಗಲಾಟೆ: ಅರ್ಜೆಂಟೀನಾ ಆಟಗಾರರ ವರ್ತನೆಗೆ ಆಕ್ರೋಶ, ತನಿಖೆಗೆ ಮುಂದಾದ FIFA

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: WHO ಶಿಫಾರಸು ಮಾಡಿರುವ ಲಸಿಕೆನ ಯಾರ್ಯಾರು ಪಡೆಯಬಹುದು!

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?