ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ದುರ್ಮರಣ

ಮುದ್ದೇಬಿಹಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ಕ್ರಾಸ್ ಬಳಿ ಮಂಗಳವಾರ ಲಾರಿಯೊಂದು ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುದ್ದೇಬಿಹಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಟ್ರ್ಯಾಕ್ಟರ್ ಅನ್ನು ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ.

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹಾಗೂ ಮೃತರ ದೇಹಗಳನ್ನು ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!