ನಮ್ಮ ಮೆಟ್ರೊ 
ರಾಜ್ಯ

Namma Metro: ಪೀಕ್ ಅವರ್ ನಲ್ಲಿ ಕೈ ಕೊಟ್ಟ ಮೆಟ್ರೊ; ಗ್ರೀನ್ ಲೈನ್ ಮಾರ್ಗದಲ್ಲಿ ಸಂಚಾರ ಪುನಾರಂಭ; Video

ವಿದ್ಯುತ್ ವ್ಯತ್ಯಯ ಉಂಟಾದ ಹಿನ್ನೆಲೆ ಗ್ರೀನ್​ಲೈನ್​ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.

ಬೆಂಗಳೂರು: ಇಂದು ಮಂಗಳವಾರ ಬೆಳಗ್ಗೆ ಪೀಕ್ ಅವರ್​​ನಲ್ಲೇ ಮತ್ತೆ ಮೆಟ್ರೋ ಸಂಚಾರ ಕೈ ಕೊಟ್ಟಿತು. ಹಸಿರು ಮಾರ್ಗದ (Green Line) ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಇಂದು ಬೆಳಗ್ಗೆ 8 ಗಂಟೆಯಿಂದ ವಿದ್ಯುತ್ ವ್ಯತ್ಯಯದ ಪರಿಣಾಮ ಈ ಮಾರ್ಗದಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತು.

ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ವಿದ್ಯುತ್ ವ್ಯತ್ಯಯ ಉಂಟಾದ ಹಿನ್ನೆಲೆ ಗ್ರೀನ್​ಲೈನ್​ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ. ಯಶವಂತಪುರದಿಂದ ನಾಗಸಂದ್ರ ನಡುವೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. ಸಿಲ್ಕ್ ಬೋರ್ಡ್ ನಿಂದ ಯಶವಂತಪುರ ನಡುವೆ ಮಾತ್ರ ಶಾರ್ಟ್-ಲೂಪ್ ಸೇವೆ ಮುಂದುವರಿದೆ.

ತಾಂತ್ರಿಕ ತಂಡಗಳ ತುರ್ತು ಕಾರ್ಯಾಚರಣೆ

ಯಶವಂತಪುರ–ನಾಗಸಂದ್ರ ನಡುವೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದ್ದು, ಸೇವೆ ಪುನಃ ಆರಂಭಿಸಲು ತಾಂತ್ರಿಕ ತಂಡಗಳ ತುರ್ತು ಕಾರ್ಯಾಚರಣೆ ನಡೆದಿದ್ದು, ಪ್ರಯಾಣಿಕರ ಅನನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸಿದೆ.

ಬಿಎಂಆರ್‌ಸಿಎಲ್ ಸ್ಪಷ್ಟನೆ

ಸೇವೆ ಕೆಲ ಹೊತ್ತಿನಲ್ಲಿ ಪುನಾರಂಭಗೊಂಡಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. 30 ರಿಂದ 40 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಂದಿನ ದಿನಗಳಲ್ಲಿ ರಾಜ್ಯ ತೀವ್ರ ಬರಗಾಲ, ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬಿಜೆಪಿ ಆಗ್ರಹಿಸಿದಂತೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಸಸ್ಪೆಂಡ್ ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!

‘ನನ್ನನ್ನು ಬೆನ್ನಟ್ಟಿದರು, ಕೊನೆಗೆ ಡಿಕ್ಕಿ ಹೊಡೆದರು’: Road Rage, ಕಾರು ಚಾಲಕನ ಕರಾಳ ಮುಖ ಬಯಲು ಮಾಡಿದ ಮಹಿಳಾ ಬೈಕ್ ರೈಡರ್! Video

‘ನಾಯಿಯನ್ನು ಲಿಫ್ಟ್‌ಗೆ ಕರೆತರಬೇಡಿ’ ಎಂದಿದ್ದಕ್ಕೆ ಜಗಳ; ಶಿಕ್ಷಕಿಗೆ ಮಹಿಳೆಯಿಂದ ಹಲ್ಲೆ, Video Viral