ಅವೆನ್ಯೂ ರಸ್ತೆಯಲ್ಲಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸಿದ ನಂತರವೂ, ಬೀದಿ ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ಪುನರಾರಂಭಿಸಿದ್ದಾರೆ. 
ರಾಜ್ಯ

Gandhi Bazaarನಲ್ಲಿ ಗುರುತಿಸಲಾದ ಸ್ಥಳಗಳಲ್ಲೇ ಬೀದಿ ವ್ಯಾಪಾರಕ್ಕೆ ಅವಕಾಶ..!

ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಅಕ್ಷರಶಃ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯಿಂದ ಗುರುತಿಸಲಾದ ಸ್ಥಳಗಳಲ್ಲಷ್ಟೇ ಬೀದಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು.

ಬೆಂಗಳೂರು: ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿ ಬೀದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳಗಳನ್ನು ಗುರುತಿಸಿ, ಅಲ್ಲಿಯೇ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಬೆಂಗಳೂರು ಕೇಂದ್ರ ನಗರ ನಿಗಮದ (BCCC) ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.

ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿನ ಬೀದಿ ವ್ಯಾಪಾರಿಗಳಿಗೆ ನಿಗದಿತ ವ್ಯಾಪಾರ ಸ್ಥಳಗಳ ಹಂಚಿಕೆ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಅಕ್ಷರಶಃ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯಿಂದ ಗುರುತಿಸಲಾದ ಸ್ಥಳಗಳಲ್ಲಷ್ಟೇ ಬೀದಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಹೇಳಿದರು.

ಇದರಿಂದ ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ, ಸಾರ್ವಜನಿಕರಿಗೆ ಪಾದಚಾರಿ ಮಾರ್ಗಗಳು ಸುರಕ್ಷಿತವಾಗಿ, ಅಡೆತಡೆಗಳಿಲ್ಲದೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಬಿಸಿಸಿಸಿ ವತಿಯಿಂದ ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯನ್ನು ಎಳೆದು ನಿಗದಿತ ವ್ಯಾಪಾರ ವಲಯಗಳನ್ನು ಗುರುತಿಸುವ ಕಾರ್ಯ ಆರಂಭಿಸಲಾಗಿದೆ. ಈ ಗುರುತುಗಳ ಉದ್ದೇಶ ಬೀದಿ ವ್ಯಾಪಾರಿಗಳನ್ನು ನಿಯಂತ್ರಿತ ಪ್ರದೇಶಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದರ ಜೊತೆಗೆ, ಪಾದಚಾರಿಗಳಿಗೆ ಮುಕ್ತವಾಗಿ ಸಂಚರಿಸಲು ಸಾಕಷ್ಟು ಜಾಗ ಉಳಿಯುವಂತೆ ನೋಡಿಕೊಳ್ಳುವುದಾಗಿದೆ.

ಸಭೆಯಲ್ಲಿ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ವೆಂಕಟಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಉಪ ಕಾನೂನು ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video