ಬಿ.ಪಿ ಹರೀಶ್ 
ರಾಜ್ಯ

ನೀಟ್ ಜಟಾಪಟಿ: ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ; ಬಿಪಿ ಹರೀಶ್‌ ಮೇಲೆ ಮೊಟ್ಟೆ ಎಸೆತ; Video

ಕೌಂಟರ್‌ ಆಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಜಟಾಪಟಿ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು, ಇದಕ್ಕೆ ಕೌಂಟರ್‌ ಆಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ.

ನೀಟ್ ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜಂತರ್ ಮಂತರ್ ನಲ್ಲಿ ಲಾಠಿ ಚಾರ್ಜ್ ನಡೆದಿತ್ತು. ಇದನ್ನು ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಹೋರಾಟ ನಡೆಸಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಈ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಿಪಿ ಹರೀಶ್ ಭಾಗಿಯಾಗಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಸ್ಥಳದಲ್ಲಿ ಐದಾರು ಮೊಟ್ಟೆಗಳು ಪತ್ತೆಯಾಗಿವೆ. ಮೊಟ್ಟೆ ಎಸೆದ ಕಾಂಗ್ರೆಸ್‌ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಪೊಲೀಸ್ ಜೀಪ್‌ನಲ್ಲೇ ಬಿಪಿ ಹರೀಶ್ ಅವರನ್ನು ಅಲ್ಲಿಂದ ಕರೆದುಕೊಂಡು ಹೋಗಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!