ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ, ಹೆಚ್ ಡಿ ಬಾಲಕೃಷ್ಣ ಮತ್ತು ಹೆಚ್ ಡಿ ರಮೇಶ್  
ರಾಜ್ಯ

'ತಾಯಿ ಚೆನ್ನಮ್ಮನವರ ಸಮಾಧಿ ಸ್ಥಳದಲ್ಲಿ ಸುಂದರ ಸ್ಮಾರಕ ನಿರ್ಮಾಣ ಮಾಡುತ್ತೇವೆ': H D ಕುಮಾರಸ್ವಾಮಿ

ಸಮಾಧಿ ಸ್ಥಳದಲ್ಲಿ ಸುಂದರ ಸ್ಮಾರಕ ನಿರ್ಮಿಸಿ ಧಾರ್ಮಿಕ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಎಂದು ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಸಮಾಧಿ ಸ್ಥಳದಲ್ಲಿ ಸುಂದರ ಸ್ಮಾರಕ ನಿರ್ಮಿಸಿ ಧಾರ್ಮಿಕ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಎಂದು ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೊನ್ನೆ ಸೋಮವಾರ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ನಡೆದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ತಾಯಿಯ ಹೆಸರನ್ನು ಚಿರಸ್ಥಾಯಿಯಾಗಿಸಲು ಇಡೀ ಕುಟುಂಬಸ್ಥರು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

11ನೇ ದಿನಕ್ಕೆ ಘೋಷಣೆ

ಸ್ಮಾರಕ ನಿರ್ಮಾಣ ಸಂಬಂಧ ಪ್ರಸಿದ್ಧ ವಾಸ್ತುಶಿಲ್ಪಿಗಳಿಂದ 300 ಕೋಟಿ ವೆಚ್ಚದ ಯೋಜನೆ ಈಗಾಗಲೇ ರೂಪುಗೊಳ್ಳುತ್ತಿದೆ. 11ನೇ ದಿನದ ಕಾರ್ಯದ ವೇಳೆ ಸ್ಮಾರಕ ನಿರ್ಮಾಣ ಕುರಿತಂತೆ ನಾನೇ ಪ್ರಕಟಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಬೆದರಿಕೆಗೆ Iran ತಿರುಗೇಟು: 'ಕಣ್ಣಿಗೆ ಕಣ್ಣು' ಉತ್ತರ, ಮೂಲಸೌಕರ್ಯಗಳ ಮೇಲೆ ದಾಳಿಯಾದರೆ ಪ್ರಬಲ ಪ್ರತೀಕಾರ ಎಂದ ಟೆಹ್ರಾನ್

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ': ನಮ್ಮತ್ತ ಬೆರಳು ತೋರಿಸುವ ಮೊದಲು ನಿಮ್ಮ ದೇಶ ನೋಡಿಕೊಳ್ಳಿ; ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು..!

'ಶಾಂತಿಯುತ ಹೋರಾಟ ಹಿಂಸೆಗೆ ತಿರುಗಿದ್ದು ನೋವಾಗಿದೆ', ವಿದ್ಯಾರ್ಥಿಗಳ ಹೋರಾಟ ರಾಜಕೀಯದ ಅಸ್ತ್ರವಾಗಬಾರದು: NEET ಪ್ರತಿಭಟನೆಗೆ Salman Khan ಬೆಂಬಲ

'ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವು ಸಿದ್ಧ': ಕೇಂದ್ರ ಆರೋಗ್ಯ ಸಚಿವ JP Nadda

Jantar Mantar ನಲ್ಲಿ ಮತ್ತೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಕಲ್ಲು ತೂರಾಟ, ಟೋಲ್ಸ್ಟಾಯ್ ಮಾರ್ಗ್‌, ಸಂಸದ್ ಮಾರ್ಗ್‌ನಲ್ಲಿ ಉದ್ವಿಗ್ನತೆ, 5 ಪೊಲೀಸರಿಗೆ ಗಾಯ