ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ನಂತರ ಚಿಕ್ಕಮಗಳೂರಿನಲ್ಲೂ ಖೋಟಾ ನೋಟು ದಂಧೆ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಖೋಟಾ ನೋಟು ಚಲಾವಣೆ ಮಾಡುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ಚಿಕ್ಕಮಗಳೂರು: ಇತ್ತೀಚಿಗಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ನಕಲಿ 500 ರೂ. ಮುದ್ರಿಸುತ್ತಿದ್ದ ಜಾಲ ಪತ್ತೆ ಹಚ್ಚಿದ್ದ ಪೊಲೀಸರು ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖೋಟಾ ನೋಟು ದಂಧೆ ಭೇದಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಖೋಟಾ ನೋಟು ಚಲಾವಣೆ ಮಾಡುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಮುಹಮ್ಮದ್ ಅಲಿ ಮತ್ತು ಮೂಡಿಗೆರೆ ಸ್ಥಳೀಯ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಬಂಧಿತರಿಂದ 200 ರೂ. ಮುಖಬೆಲೆಯ 90 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 18,000 ರೂ. ಆಗಿದೆ. ನೋಟಿನ ಮೇಲೆ ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಲಾಗಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ