ಪ್ರಜ್ವಲ್ ರೇವಣ್ಣ 
ರಾಜ್ಯ

ಅಜ್ಜಿ ತಿಥಿಯ ದಿನ Prajwal Revanna ಕರೆತರಲು ಕುಟುಂಬ ಯತ್ನ; ಪೆರೋಲ್ ನೀಡಲು ಸಾಧ್ಯವಿಲ್ಲ ಎಂದ ಕಾರಾಗೃಹ ಇಲಾಖೆ

ಇತ್ತೀಚಿಗೆ ನಿಧನರಾದ ಪ್ರಜ್ವಲ್‌ ರೇವಣ್ಣ ಅವರ ಅಜ್ಜಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಜೈಲಿನಿಂದ ಅವರನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ.

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚಿಗೆ ನಿಧನರಾದ ಪ್ರಜ್ವಲ್‌ ರೇವಣ್ಣ ಅವರ ಅಜ್ಜಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಜೈಲಿನಿಂದ ಅವರನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಆದರೆ ಕಾರಾಗೃಹ ಇಲಾಖೆ, ಮಾಜಿ ಸಂಸದನಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ತಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದೆ.

ಇದೀಗ ಪ್ರಜ್ವಲ್ ಅವರ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, 15 ದಿನಗಳ ಕಾಲ ಪೆರೋಲ್ ಸಿಕ್ಕರೆ ಜುಲೈ 30ಕ್ಕೆ ನಿಗದಿಯಾಗಿರುವ ಅಜ್ಜಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲಿದ್ದಾರೆ.

ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಜೈಲಿನಲ್ಲಿ ಮಾತನಾಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು, ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video