ಪ್ರಿಯಾಂಕ್ ಖರ್ಗೆ 
ರಾಜ್ಯ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವಂತೆ ಇದಕ್ಕೆ ನೇಮಕಾತಿಯನ್ನು ಮಾಡುವಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವಂತೆ ಇದಕ್ಕೆ ನೇಮಕಾತಿಯನ್ನು ಮಾಡುವಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಅಗ್ನಿಶಾಮಕ, ಶೋಧನೆ ಮತ್ತು ರಕ್ಷಣಾ ಕಾರ್ಯಗಳು, ನೈಸರ್ಗಿಕ ವಿಕೋಪಗಳಿಗೆ ತ್ವರಿತ ಸ್ಪಂದನೆ ಹಾಗೂ ವಿಪತ್ತು ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

* ರಾಜ್ಯದ 219 ಅಗ್ನಿಶಾಮಕ ಠಾಣೆಗಳ ಕಾರ್ಯನಿರ್ವಹಣೆಯ ಸ್ಥಿತಿ ಪರಿಶೀಲನೆ ನಡೆಸಿ ಶೀಘ್ರದಲ್ಲಿಯೇ ವರದಿಗೆ ಸೂಚನೆ.

* 490 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರ್ಥಿಕ ಇಲಾಖೆಯ ಸಮನ್ವಯದೊಂದಿಗೆ ತ್ವರಿತಗೊಳಿಸಿ, 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ.

* ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡವಿಲ್ಲದೆ ಇತರ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಠಾಣೆಗಳ ಮಾಹಿತಿ ಸಲ್ಲಿಸಿ, ಅಗತ್ಯವಿರುವ ಜಿಲ್ಲೆಗಳಲ್ಲಿ ಸ್ವಂತ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ.

* ಸಿಬ್ಬಂದಿಗೆ ಅಗತ್ಯವಿರುವ ನಿವಾಸ ಸೌಲಭ್ಯಗಳನ್ನು ಶೇ.50ರಷ್ಟು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚನೆ.

* ವಿಪತ್ತು ಸಂದರ್ಭಗಳಲ್ಲಿ ತ್ವರಿತ ಮತ್ತು ಪರಿಣಾಮಕಾರಿ ಸ್ಪಂದನೆ ಅತ್ಯಗತ್ಯವಾಗಿದೆ. SDRF ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಬೇಕೆಂದು ತಿಳಿಸಲಾಗಿದೆ.

* ಗೃಹರಕ್ಷಕ ದಳವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಾರ್ಯಕ್ರಮಗಳ ರೂಪಿಸಿ, ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಸೂಚನೆ.

* ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ಅಗ್ನಿಶಾಮಕ, ವಿಪತ್ತು ನಿರ್ವಹಣೆ ಹಾಗೂ ಗೃಹರಕ್ಷಕ ದಳಗಳನ್ನು ಇನ್ನಷ್ಟು ಆಧುನಿಕ, ಸಬಲ ಮತ್ತು ಜನಸ್ನೇಹಿಯಾಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!

ರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!