ಮೃತಪಟ್ಟ ಮಹಿಳೆ ಭಾಗ್ಯಶ್ರೀ 
ರಾಜ್ಯ

ಬಾಗಲಕೋಟೆ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ!

ಪತ್ನಿ ಉಸಿರುಗಟ್ಟಿ ಸಾಯುತ್ತಿರುವ ವಿಡಿಯೋವನ್ನು ಆಕೆಯ ಗಂಡನೇ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾಳೆ.

ಪತ್ನಿ ಉಸಿರುಗಟ್ಟಿ ಸಾಯುತ್ತಿರುವ ವಿಡಿಯೋವನ್ನು ಆಕೆಯ ಗಂಡನೇ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು 23 ವರ್ಷದ ಭಾಗ್ಯಶ್ರೀ ಎನ್ನಲಾಗಿದೆ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಶಂಕೆ? ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯಿಂದ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಆಕೆಯ ಪತಿ ಪ್ರವೀಣ್ ಜಗಳೂರು ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

ಜಗಳ ಮಾಡಿ 2 ತಿಂಗಳ ಹಿಂದೆ ಭಾಗ್ಯಶ್ರೀ ತವರು ಮನೆ ಸೇರಿದ್ದಳು ಎಂದು ತಿಳಿದುಬಂದಿದೆ. ಆಕೆಯ ಮನವೊಲಿಸಿ ಮನೆಗೆ ಕರೆದುಕೊಂಡು ಬಂದಿದ್ದ ಆರೋಪಿ ಇಂದು ಸಂಜೆ ಕೊಲೆ ಮಾಡಿದ್ದು, ಬಳಿಕ ಆಕೆಯನ್ನು ನೇಣು ಹಾಕಿದ್ದು, ವಿಡಿಯೋವನ್ನು ಆಕೆಯ ಸಂಬಂಧಿಕರಿಗೆ ಕಳುಹಿಸಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ