ಪ್ರಾತಿನಿಧಿಕ ಚಿತ್ರ 
ರಾಜ್ಯ

ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಏರಿದ ಮಾನಸಿಕ ಅಸ್ವಸ್ಥ; ಆಪರೇಟರ್ ಕ್ಯಾಬಿನ್‌ಗೆ ಪ್ರವೇಶ, ಆತಂಕ ಸೃಷ್ಟಿ!

ಮಾರತ್‌ಹಳ್ಳಿ ಬಳಿ ಮೆಟ್ರೋ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಮೆಟ್ರೋ ನಿರ್ಮಾಣ ಸ್ಥಳದಲ್ಲಿ ವ್ಯಕ್ತಿಯೊಬ್ಬ ಕ್ರೇನ್‌ನ ಮೇಲ್ಭಾಗಕ್ಕೆ ಹತ್ತಿದ್ದರಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಯಿತು. ಆ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರತ್‌ಹಳ್ಳಿ ಬಳಿ ಮೆಟ್ರೋ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾಗಶಃ ಬಟ್ಟೆ ಧರಿಸಿದ್ದ ವ್ಯಕ್ತಿ ಕ್ರೇನ್ ಹತ್ತಿ ಆಪರೇಟರ್ ಕ್ಯಾಬಿನ್‌ಗೆ ಪ್ರವೇಶಿಸಿಸದ್ದಾನೆ. ಇದು ಕಾರ್ಮಿಕರಲ್ಲಿ ಭೀತಿ ಉಂಟುಮಾಡಿದೆ.

ಆತನನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕೆಳಗೆ ಇಳಿಸುವಲ್ಲಿ ಯಶಸ್ವಿಯಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆ ವ್ಯಕ್ತಿಯನ್ನು ರಕ್ಷಿಸಿದ ನಂತರ ಕಟ್ಟಿಹಾಕಿ ಥಳಿಸಲಾಗಿದೆ ಎಂಬ ವರದಿಯಾಗಿದ್ದು, ಮೆಟ್ರೋ ಅಧಿಕಾರಿಯೊಬ್ಬರು ಆ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ಸತ್ಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಆ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಿದ್ದ ಮತ್ತು ಈ ಸಂಬಂಧ ಬಿಎಂಆರ್‌ಸಿಎಲ್‌ನಿಂದ ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ. ಆದ್ದರಿಂದ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ' ಎಂದು ಅಧಿಕಾರಿ ಹೇಳಿದರು.

ಆ ವ್ಯಕ್ತಿಯನ್ನು ನಂತರ ಆತನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಕೊನೆಗೂ ಸುರಿದ ಮಳೆರಾಯ, ನಿಟ್ಟಿಸಿರುವ ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?