ಮೊಬೈಲ್ ಅಂಗಡಿ ಸಿಬ್ಬಂದಿಗಳ ನಡುವೆ ಮಾರಾಮಾರಿ 
ರಾಜ್ಯ

ರಾಜ್‌ಕುಮಾರ್ ರಸ್ತೆಯಲ್ಲಿ ಹೈಡ್ರಾಮಾ; ಮೊಬೈಲ್ ಅಂಗಡಿ ಸಿಬ್ಬಂದಿಗಳ ನಡುವೆ ಮಾರಾಮಾರಿ, 17 ಮಂದಿ ವಿರುದ್ಧ ಪ್ರಕರಣ, Video

ಜುಲೈ 23, 2026ರ ರಾತ್ರಿ ಸುಮಾರು 9.40 ಗಂಟೆಗೆ ರಾಜ್‌ಕುಮಾರ್ ರಸ್ತೆಯಲ್ಲಿರುವ ಕಲರ್ಸ್ ಮೊಬೈಲ್ (Colours Mobile) ಅಂಗಡಿ ಎದುರು ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯಲ್ಲಿ ಎರಡು ಮೊಬೈಲ್ ಅಂಗಡಿಗಳ ಮಾಲೀಕರು ಹಾಗೂ ಅವರ ಸಿಬ್ಬಂದಿಗಳ ನಡುವೆ ನಡೆದ ಭೀಕರ ಮಾರಾಮಾರಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಳಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು.

ತಕ್ಷಣ ಸ್ಥಳಕ್ಕಾಗಮಿಸಿದ ಮಾಗಡಿ ರಸ್ತೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು 17 ಮಂದಿಯ ವಿರುದ್ಧ ಗಲಾಟೆ (Affray) ಪ್ರಕರಣ ದಾಖಲಿಸಿದ್ದಾರೆ. ಜುಲೈ 23, 2026ರ ರಾತ್ರಿ ಸುಮಾರು 9.40 ಗಂಟೆಗೆ ರಾಜ್‌ಕುಮಾರ್ ರಸ್ತೆಯಲ್ಲಿರುವ ಕಲರ್ಸ್ ಮೊಬೈಲ್ (Colours Mobile) ಅಂಗಡಿ ಎದುರು ಈ ಘಟನೆ ನಡೆದಿದೆ ಎನ್ನಲಾಗಿದೆ.

ಗಸ್ತಿನಲ್ಲಿದ್ದ ಸಹಾಯಕ ಪೊಲೀಸ್ ಉಪನಿರೀಕ್ಷಕರು (ಎಎಸ್‌ಐ) ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಸುಮಾರು 20 ಮಂದಿ ರಸ್ತೆಯಲ್ಲೇ ಪರಸ್ಪರ ನಿಂದನೆ ಮಾಡುತ್ತಾ ಕೈಕೈ ಮಿಲಾಯಿಸುತ್ತಿರುವುದು ಕಂಡುಬಂದಿತ್ತು. ಸಾರ್ವಜನಿಕರ ಎದುರೇ ನಡೆದ ಈ ಗಲಾಟೆಯಿಂದ ರಸ್ತೆಯಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಣ್ಣ ವಿಚಾರಕ್ಕೆ ದೊಡ್ಡ ಗಲಾಟೆ

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಲರ್ಸ್ ಮೊಬೈಲ್ ಮಾಲೀಕ ಸಿದ್ದರಾಜು ಆರ್ (40) ಹಾಗೂ ಸ್ಟಾರ್ ಮೊಬೈಲ್ (Star Mobile) ಮಾಲೀಕ ದೀಪಕ್ (30) ಈ ಗಲಾಟೆಯ ಪ್ರಮುಖ ಪ್ರಚೋದಕರಾಗಿರುವುದು ತಿಳಿದುಬಂದಿದೆ.

ಸಣ್ಣ ವಿಚಾರಕ್ಕೆ ಆರಂಭವಾದ ವಾಗ್ವಾದ ಕ್ಷಣಾರ್ಧದಲ್ಲೇ ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿದ್ದು, ಎರಡೂ ಗುಂಪಿನವರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಮೀಪದ ಅಂಗಡಿಗಳು ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವ ಆತಂಕವೂ ಎದುರಾಯಿತು.

ಸಾರ್ವಜನಿಕರಲ್ಲಿ ಭೀತಿ

ಎರಡೂ ಗುಂಪಿನವರ ಆಕ್ರಮಣಕಾರಿ ವರ್ತನೆಯಿಂದ ಅಲ್ಲಿದ್ದ ಸಾರ್ವಜನಿಕರು ಭಯಭೀತರಾಗಿದ್ದು, ವಾಹನ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಯಿತು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

17 ಮಂದಿಯ ವಿರುದ್ಧ ಪ್ರಕರಣ

ಘಟನೆ ಸಂಬಂಧ ಮಾಗಡಿ ರಸ್ತೆ ಪೊಲೀಸರು ಸ್ವಯಂಪ್ರೇರಿತವಾಗಿ (Suo Motu) ಪ್ರಕರಣ ದಾಖಲಿಸಿದ್ದು, ಒಟ್ಟು 17 ಆರೋಪಿಗಳನ್ನು ಹೆಸರಿಸಿದೆ.

ಇನ್ನೂ ಕೆಲ ಗುರುತಿಸಲಾಗದ ವ್ಯಕ್ತಿಗಳೂ ಗಲಾಟೆಯಲ್ಲಿ ಭಾಗಿಯಾಗಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)-2023ರ ಸೆಕ್ಷನ್ 194(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ