ನವೀನ್ ಕುಮಾರ್ ಬಳಗಾರ್ 
ರಾಜ್ಯ

ಶಿವಮೊಗ್ಗದ ಲಾಡ್ಜ್‌ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ಶಿವಮೊಗ್ಗದ ಲಾಡ್ಜ್‌ ಒಂದರಲ್ಲಿ ಸೋಮವಾರ ಕ್ರಷರ್ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ನಿಗೂಢವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಬಸವರಾಜ್ ಅವರು ನಗರದ ಲಾಡ್ಜ್‌ ಒಂದರಲ್ಲಿ ರೂಂ ಪಡೆದು, ಅಲ್ಲಿಯೇ ಅವರು ನೇಣಿಗೆ ಶರಣಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು, ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!

ಕಾಂಗ್ರೆಸ್‌ ದೇಶವಿರೋಧಿಗಳ ಪರ, ಉಮರ್ ಖಾಲಿದ್‌ ಪರ ಹರಿಪ್ರಸಾದ್ ಹೇಳಿಕೆಗೆ ಸಂಸದ ಬೊಮ್ಮಾಯಿ ತೀವ್ರ ಕಿಡಿ

ಸಿದ್ದು ಬಲಿಷ್ಠರಾಗಿದ್ದರೆ ಕಾಂಗ್ರೆಸ್‌ ಬಲಿಷ್ಠ, ಸಿದ್ದು ದುರ್ಬಲರಾದರೆ ಕಾಂಗ್ರೆಸ್‌ ದುರ್ಬಲ: ಕೆ.ಎನ್. ರಾಜಣ್ಣ