ಶಿವಲಿಂಗೇಗೌಡ 
ರಾಜ್ಯ

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಮನವೊಲಿಸುತ್ತೇವೆ: ಶಾಸಕ KM ಶಿವಲಿಂಗೇಗೌಡ

ಸಿದ್ದರಾಮಯ್ಯ ಅವರು 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ. ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುತ್ತದೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2028 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ, ಆದರೆ ಅವರನ್ನು ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಮನವೊಲಿಸಲು ಪಕ್ಷದ ನಾಯಕರು ಪ್ರಯತ್ನಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಸೋಮವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ. ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುತ್ತದೆ, ಆದ್ದರಿಂದ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ ಅವರು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ಮುಂದುವರಿಸುವುದಾಗಿ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೂ, ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಅವರನ್ನು ಮನವೊಲಿಸಲು ನಾವೆಲ್ಲರೂ ಪ್ರಯತ್ನಿಸುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತರಾಗುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಕಿರಿಯ ನಾಯಕರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರೆ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಶಾಸಕ ಅಶೋಕ್ ಪಟ್ಟಣ್ ಹೇಳಿದರು.

ಕಾಂಗ್ರೆಸ್ ಎಂಎಲ್ಸಿ ಎಸಿ ಶ್ರೀನಿವಾಸ ಮಾತನಾಡಿ ಸಿದ್ದರಾಮಯ್ಯ ಅವರು ಇನ್ನೂ ಹಲವು ವರ್ಷಗಳ ಕಾಲ ರಾಜಕೀಯದ ಮೂಲಕ ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತಾರೆ .ಕರ್ನಾಟಕದ ಜನರು ಅವರನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!