ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ  
ರಾಜ್ಯ

'ನಿನ್ನ ರೇಟ್ ಎಷ್ಟು?': ಬೆಂಗಳೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಗುರುತು ಪತ್ತೆ; Video

ಮಹಿಳೆ ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ತಾನು ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾದನು ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬೆಂಗಳೂರು ಪೊಲೀಸರ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಹಿಳೆಯ ಹೇಳಿಕೆಯ ಪ್ರಕಾರ, ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ "ನಿನ್ನ ರೇಟ್ ಎಷ್ಟು?" ಎಂದು ಕೇಳಿದ್ದು, ಬೆದರಿಕೆ ಹುಟ್ಟಿಸುವ ರೀತಿಯ ಮಾತುಗಳನ್ನೂ ಆಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮಹಿಳೆ, "ಒಬ್ಬ ಮಹಿಳೆಯಾಗಿ ನಾನು ಕ್ಯಾಬ್‌ಗಾಗಿ ಕಾಯುವಾಗ ನನ್ನನ್ನು ವಸ್ತುವಿನಂತೆ ಕಾಣುವುದು ಅಥವಾ ಹಣಕ್ಕಾಗಿ ಕೇಳುವುದು ಮಹಿಳೆಯರ ಸುರಕ್ಷಿತತೆಯನ್ನು ಪ್ರಶ್ನೆ ಮಾಡುವಂತೆ ಮಾಡಿದೆ. ಅವನ ಮಾತುಗಳು ಬೆದರಿಕೆ ಹುಟ್ಟಿಸುವಂತಿದ್ದವು, ಅಗೌರವದಿಂದ ಕೂಡಿದ್ದವು ಎಂದು ಬರೆದುಕೊಂಡಿದ್ದಾರೆ.

ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಲು ಆರಂಭಿಸಿದಾಗ ತಾನು ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿಯ ದ್ವಿಚಕ್ರ ವಾಹನ ಸಂಖ್ಯೆ KA03 KQ6190 ಎಂದು ತಿಳಿಸಿರುವ ಅವರು, ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇಂತಹ ವರ್ತನೆಯನ್ನು ಯಾವುದೇ ಕಾರಣಕ್ಕೂ ಸಹಜವೆಂದು ಒಪ್ಪಿಕೊಳ್ಳಬಾರದು. ಮೌನವು ಅಪರಾಧಿಗಳಿಗೆ ಮತ್ತಷ್ಟು ಧೈರ್ಯ ನೀಡುತ್ತದೆ. ಸಾರ್ವಜನಿಕ ಸ್ಥಳಗಳು ಪ್ರತಿಯೊಬ್ಬರಿಗೂ ಸುರಕ್ಷಿತ ಹಾಗೂ ಗೌರವಯುತವಾಗಿರಬೇಕು ಎಂದು ಮಹಿಳೆ ತಮ್ಮ ಪೋಸ್ಟ್‌ನಲ್ಲಿ ತಿಳಿಸಿ, ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ