ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ಮತ್ತು ಜಲಸಂಪನ್ಮೂಲ ಇಲಾಖೆಗಳ ಅಧಿಕಾರಿಗಳನ್ನು ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದರು. 
ರಾಜ್ಯ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ; ಡಿಕೆಶಿ ಧನ್ಯವಾದ

ಇಂದು ರಾಜ್ಯಸಭೆಯಲ್ಲಿ ಜಲಶಕ್ತಿ ಖಾತೆ ರಾಜ್ಯ ಸಚಿವರು ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಇದೇ ವಿಷಯವನ್ನು ಪುನರುಚ್ಚರಿಸಿದ್ದಾರೆ. ಕರ್ನಾಟಕದ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆ ನಿರ್ಮಾಣಕ್ಕೆ ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕ ತನ್ನ ಭೂಭಾಗದಲ್ಲಿ ಸಮತೋಲನ ಜಲಾಶಯ ನಿರ್ಮಿಸಲು ಯಾವುದೇ ರಾಜ್ಯದ ಅನುಮತಿ ಅಗತ್ಯವಿಲ್ಲ ಹಾಗೂ ಇತರ ರಾಜ್ಯಗಳಿಗೆ ಆಕ್ಷೇಪಿಸುವ ಹಕ್ಕೂ ಇಲ್ಲ ಎಂದು ಅವರು ಹೇಳಿದರು.

ಸೋಮವಾರ ನವದೆಹಲಿಯಲ್ಲಿ ಕರ್ನಾಟಕದ ಸಂಸದರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಇಂದು ರಾಜ್ಯಸಭೆಯಲ್ಲಿ ಜಲಶಕ್ತಿ ಖಾತೆ ರಾಜ್ಯ ಸಚಿವರು ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಇದೇ ವಿಷಯವನ್ನು ಪುನರುಚ್ಚರಿಸಿದ್ದಾರೆ. ಕರ್ನಾಟಕದ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ" ಎಂದರು.

ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತಮ್ಮನ್ನು ಭೇಟಿ ಮಾಡಲು ಬಯಸಿದ್ದಾರೆ ಎಂಬ ಮಾಹಿತಿಯನ್ನೂ ಸಂಸದರಿಗೆ ನೀಡಿದರು.

ಸಂಸತ್ತಿನಲ್ಲಿ ಉತ್ತರಿಸಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, 2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ತೀರ್ಪು ಹಾಗೂ ಕೇಂದ್ರ ಜಲ ಆಯೋಗದ (CWC) ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕರಿಸಿ ಮರುಸಲ್ಲಿಸುವಂತೆ ಯೋಜನಾ ಪ್ರಾಧಿಕಾರಕ್ಕೆ ಹಿಂದಿರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ರಾಜ್ಯಸಭಾ ಸದಸ್ಯ ಡಾ. ಅನ್ಬುಮಣಿ ರಾಮದಾಸ್, ಮೇಕೆದಾಟು ಯೋಜನೆಗೆ ಕರ್ನಾಟಕವು ಕೆಳಹರಿವು ರಾಜ್ಯಗಳ ಅನುಮತಿ ಪಡೆದಿದೆಯೇ ಎಂದು ಪ್ರಶ್ನಿಸಿದ್ದರು.

ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ನೆರವು

ಬೆಂಗಳೂರಿನಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಮೇಕೆದಾಟುವಿನಲ್ಲಿ 67 ಟಿಎಂಸಿ ಅಡಿ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಮುಂದಿಟ್ಟಿದೆ.

ರಾಜ್ಯ ಸರ್ಕಾರದ ಪ್ರಕಾರ, ಈ ಯೋಜನೆಯಿಂದ ಬರಗಾಲದ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಅನುಕೂಲವಾಗಲಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆ ಬಲವಾಗಲಿದೆ. ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಈ ಹಿಂದೆ ಹಲವು ಬಾರಿ, ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಪ್ರಯೋಜನವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿನ ಪಾಲಿನ 177 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ, ‘ವಿಶ್ವದ ಅತ್ಯಂತ ಜನಪ್ರಿಯ ನಾಯಕ’ ಎಂದು ಬಣ್ಣನೆ..!

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ..!

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

9/11 ಪಾಠ ಮರೆಯದಿರಿ, ಉಗ್ರರಿಗೆ ಆಶ್ರಯ ನೀಡುವ ವ್ಯವಸ್ಥೆ ಕಿತ್ತೊಗೆಯಿರಿ: JeM, LeT ಹೆಸರು ಪ್ರಸ್ತಾಪಿಸಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಚಾಟಿ..!

ಮದ್ಯದ ಅಮಲಿನಲ್ಲಿ ಜಡ್ಜ್‌ ಎದುರೇ ರಂಪಾಟ: ಜೈಲು ಶಿಕ್ಷೆ ವಿಧಿಸಿ ಕುಡುಕ ವಕೀಲನಿಗೆ ತಕ್ಕ ಶಾಸ್ತಿ ಮಾಡಿದ ಹೈಕೋರ್ಟ್‌..!