ಸಂಗ್ರಹ ಚಿತ್ರ 
ರಾಜ್ಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು; ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

ರಾಜ್ಯಾಂತರ ಗಡಿಗಳು ಹಾಗೂ ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ಪರಿಶೀಲಕ (ಡಿಜಿ & ಐಜಿಪಿ) ಎಂ.ಎ. ಸಲೀಂ ಅವರು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕೇವಲ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಅದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಗಂಭೀರ ಸವಾಲು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುತ್ತೋಲೆಯ ಪ್ರಕಾರ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸುವುದು, ನಿರಂತರ ನಿಗಾ ವಹಿಸುವುದು, ಅಕ್ರಮ ಸಾಗಣೆ ಹಾಗೂ ಸಂಗ್ರಹಣೆ ತಡೆಯುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವ ಜವಾಬ್ದಾರಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯಾಂತರ ಗಡಿಗಳು ಹಾಗೂ ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಲ್ಲದೆ, ತನಿಖೆ ಮತ್ತು ಜಾರಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಅಗತ್ಯ ಮೂಲಸೌಕರ್ಯದಲ್ಲಿ ಕೊರತೆ ಕಂಡುಬಂದರೆ ತಕ್ಷಣ ಸಂಬಂಧಿತ ಇಲಾಖೆಯ ಗಮನಕ್ಕೆ ತರಬೇಕೆಂದು ಸೂಚಿಸಲಾಗಿದೆ.

ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ನೈಸರ್ಗಿಕ ಸಂಪತ್ತಿನ ರಕ್ಷಣೆ ಮತ್ತು ಕಾನೂನಿನ ಆಳ್ವಿಕೆಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಕ್ರಮ ಮರಳು ದಂಧೆಯಲ್ಲಿ ಪದೇಪದೇ ತೊಡಗುವ ಅಭ್ಯಾಸದ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಎಲ್ಲಾ ಪೊಲೀಸ್ ಘಟಕಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಠಾಣಾವಾರು ಅಕ್ರಮ ಮರಳು ಗಣಿಗಾರಿಕೆ, ಸಾಗಣೆ ಮತ್ತು ಸಂಗ್ರಹಣೆಗೆ ಸಂಬಂಧಿಸಿದ ಪ್ರಕರಣಗಳ ಪ್ರಗತಿಯನ್ನು ಕಡ್ಡಾಯವಾಗಿ ಪರಿಶೀಲಿಸಿ, ಅಧೀನ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಡಿಜಿ & ಐಜಿಪಿ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: ‘ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ’; ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ನಿಂದ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ!

ದೆಹಲಿ: ಎಸ್. ಜೈಶಂಕರ್, ಮಾಜಿ ಸೇನಾ ಮುಖ್ಯಸ್ಥ ಹಾಗೂ ಸಿಬಿಐ ನಿರ್ದೇಶಕರಿಗೆ 'SIR' ನೋಟಿಸ್‌

ಅಸಹ್ಯಕರವಾಗಿ ಫೋಟೋ ತೆಗೆಯುವವರಿಗೆ ಹೊಡೆಯಿರಿ: ಶರ್ಟ್ ಬಿಚ್ಚಿ ಪಾಪರಾಜಿಗಳ ವಿರುದ್ಧ ಸಲ್ಮಾನ್ ಖಾನ್ ಗರಂ!

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video