ಶಾಸಕ ಹೆಚ್ ಸಿ ಬಾಲಕೃಷ್ಣ ಸಾಂದರ್ಭಿಕ ಚಿತ್ರ 
ರಾಜ್ಯ

ಬಿಡದಿ ಟೌನ್ ಶಿಪ್ ಯೋಜನೆ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ; ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ- ಹೆಚ್.ಸಿ ಬಾಲಕೃಷ್ಣ!

ಸಚಿವ ಸಂಪುಟದಲ್ಲಿ ಶೇ.60 ರಷ್ಟು ಹೊಸಬರು ಹಾಗೂ ಶೇ. 40 ರಷ್ಟು ಹಳಬರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆದಿದೆ. ನಾನು ಕೂಡಾ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದು ಬಾಲಕೃಷ್ಣ ಹೇಳಿದರು.

ರಾಮನಗರ: ಬಿಡದಿ ಟೌನ್ ಶಿಪ್ ವಿಚಾರ ಮುಗಿದ ಅಧ್ಯಾಯ. ಏಳು ಗ್ರಾಮಗಳಲ್ಲಿ ಭೂ ಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಉಳಿದೆರಡು ಗ್ರಾಮಗಳಿಗೂ ಶೀಘ್ರ ಅಧಿಸೂಚನೆ ಹೊರಬೀಳಲಿದೆ. ಟೌನ್ ಶಿಪ್ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ ಎಂದು ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ ಮಂಗಳವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೌನ್ ಶಿಪ್ ನಿರ್ಮಾಣಕ್ಕೆ ಭೂಮಿ ಕೊಡಲು ಒಪ್ಪಿರುವವರು ಪರಿಹಾರ ಮತ್ತು ಪಾಲುದಾರಿಕೆ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಯೋಜನೆ ಬೇಡ ಎನ್ನುವವರು ಹೋರಾಟ ಮಾಡ್ತಿದ್ದಾರೆ. ರೈತರ ಜೊತೆಗೆ ಜಿಲ್ಲಾಧಿಕಾರಿ ಈಗಾಗಲೇ ಸಭೆ ಮಾಡಿದ್ದಾರೆ. ಆ ಪೈಕಿ ಕೆಲವರು ಒಪ್ಪಿದ್ದು, ಉಳಿದವರು ಬೇಡ ಎನ್ನುತ್ತಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆಯಲಾಗುವುದು ಎಂದರು.

ಯೋಜನಾ ಪ್ರದೇಶದ ರೈತರ ಅಹವಾಲು ಆಲಿಸಲು ಶೀಘ್ರದಲ್ಲಿಯೇ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ತಿಳಿಸಿದರು.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಬಾಲಕೃಷ್ಣ, ಸಚಿವ ಸಂಪುಟದಲ್ಲಿ ಶೇ.60 ರಷ್ಟು ಹೊಸಬರು ಹಾಗೂ ಶೇ. 40 ರಷ್ಟು ಹಳಬರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆದಿದೆ. ನಾನು ಕೂಡಾ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದರು.

ಈ ವಿಷಯದಲ್ಲಿ ಮುಖ್ಯಮಂತ್ರಿ ಅವರು ಸಚಿವ ಸ್ಥಾನದ ಬಗ್ಗೆ ಯಾವುದೇ ಭರವಸೆ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಲಿದೆ. ಅಲ್ಲಿಯವರೆಗೂ ಕಾಯಬೇಕಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ