ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ನಗರದ ಹಲವೆಡೆ ಹಳೆಯ ಹಾಗೂ ಹಾಳಾದ ವಿದ್ಯುತ್ ಕಂಬಗಳು, ತೂಗುತಂತಿಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸಿರುವ ಕಬ್ಬಿಣದ ರಾಡ್‌ಗಳು ಪಾದಚಾರಿಗಳಿಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಇರುವುದನ್ನು ಉಲ್ಲೇಖಿಸಿದ ಸಚಿವರು, ಇಂತಹ ಅಪಾಯಕಾರಿ ಅಡೆತಡೆಗಳನ್ನು ತಕ್ಷಣವೇ ತೆರವುಗೊಳಿಸಬೇಕು.

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಬೆಸ್ಕಾಂನ ಎಲ್ಲಾ ಟ್ರಾನ್ಸ್‌ಫಾರ್ಮರ್ ಹಾಗೂ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಎಲ್ಲಾ ಫುಟ್‌ಪಾತ್‌ಗಳಲ್ಲಿ ಬೆಸ್ಕಾಂಗೆ ಸಂಬಂಧಿಸಿದ ಅಡೆತಡೆಗಳ ಸಮಗ್ರ ಪಟ್ಟಿ (ಇನ್‌ವೆಂಟರಿ) ಸಿದ್ಧಪಡಿಸಿ, ಅವುಗಳನ್ನು ತೆರವುಗೊಳಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಸ್ಕಾಂಗೆ ಸಂಬಂಧಿಸಿದ ಎಲ್ಲ ರೀತಿಯ ಅಡೆತಡೆಗಳನ್ನು ಈ ಅಭಿಯಾನದ ಅವಧಿಯಲ್ಲಿ ತೆರವುಗೊಳಿಸಬೇಕು" ಎಂದು ನಿರ್ದೇಶನ ನೀಡಿದರು.

ನಗರದ ಹಲವೆಡೆ ಹಳೆಯ ಹಾಗೂ ಹಾಳಾದ ವಿದ್ಯುತ್ ಕಂಬಗಳು, ತೂಗುತಂತಿಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸಿರುವ ಕಬ್ಬಿಣದ ರಾಡ್‌ಗಳು ಪಾದಚಾರಿಗಳಿಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಇರುವುದನ್ನು ಉಲ್ಲೇಖಿಸಿದ ಸಚಿವರು, ಇಂತಹ ಅಪಾಯಕಾರಿ ಅಡೆತಡೆಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಸೂಚಿಸಿದರು.

ಫುಟ್‌ಪಾತ್‌ನಲ್ಲಿರುವ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಕ್ಕೆ ಸೂಚನೆ

ಇದೇ ವೇಳೆ ಫುಟ್‌ಪಾತ್‌ಗಳ ಮೇಲೆ ಇರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಚಿವರು ಆದೇಶಿಸಿದರು.

ಬೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಲ್ಪಾವಧಿ ಹಾಗೂ ದೀರ್ಘಾವಧಿಯ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪಾರ್ಟ್‌ಮೆಂಟ್ ಮಾಲೀಕರಿಗೂ ಸೂಚನೆ

ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಕೆಲವು ಖಾಸಗಿ ಅಪಾರ್ಟ್‌ಮೆಂಟ್‌ಗಳು ತಮ್ಮ ಟ್ರಾನ್ಸ್‌ಫಾರ್ಮರ್‌ಗಳನ್ನು ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿವೆ. ಅಂತಹ ಆಸ್ತಿ ಮಾಲೀಕರು ತಮ್ಮ ಆವರಣದೊಳಗೆ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಬೇಕು ಎಂದು ಸೂಚನೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ರೀತಿಯ ಅಡೆತಡೆಗಳನ್ನು ನಿವಾರಿಸಲು ಬೆಸ್ಕಾಂ ವಿಶೇಷ ಅಭಿಯಾನ ಕೈಗೊಂಡು ಅಗತ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಹೇಳಿದರು.

ಇದೇ ವೇಳೆ ಬಳಕೆಯಲ್ಲಿಲ್ಲದ ಎಲ್ಲಾ ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಬೇಕು. ಅವುಗಳ ಸುತ್ತಮುತ್ತ ಸಂಗ್ರಹವಾಗಿರುವ ತ್ಯಾಜ್ಯವನ್ನೂ ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಪಾದಚಾರಿಗಳ ಸುರಕ್ಷತೆಗೆ ಒತ್ತು

ಫುಟ್‌ಪಾತ್‌ಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಪಾದಚಾರಿಗಳಿಗೆ ತೊಂದರೆಯಾಗದಂತೆ ವಿನ್ಯಾಸಗೊಳಿಸಿ ಅಳವಡಿಸಬೇಕು. ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸುವ ಕಬ್ಬಿಣದ ರಾಡ್‌ಗಳು ಕನಿಷ್ಠ ಏಳು ಅಡಿ ಎತ್ತರದಲ್ಲಿ ಇರಬೇಕು ಎಂದು ಸಚಿವರು ಸೂಚಿಸಿದರು.

ನಗರದ ಎಲ್ಲ ಫುಟ್‌ಪಾತ್‌ಗಳನ್ನು ಸುರಕ್ಷಿತ ಪಾದಚಾರಿ ವಲಯಗಳಾಗಿ ಪರಿಗಣಿಸಿ, ಏಕರೂಪದ ವಿನ್ಯಾಸ ಮಾನದಂಡವನ್ನು ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

7,000 ಹಳೆಯ ಟ್ರಾನ್ಸ್‌ಫಾರ್ಮರ್‌ಗಳ ಬದಲಾವಣೆ ಪೂರ್ಣ

ಸಭೆಯಲ್ಲಿ ಮಾಹಿತಿ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್, ನಗರದ ಫುಟ್‌ಪಾತ್‌ಗಳಲ್ಲಿದ್ದ ಸುಮಾರು 7,000 ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಈಗಾಗಲೇ ಬದಲಾಯಿಸಲಾಗಿದೆ ಎಂದು ತಿಳಿಸಿದರು.

ಉಳಿದಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ವಿಶೇಷ ಅಭಿಯಾನದ ಮೂಲಕ ಪರಿಹರಿಸಲಾಗುವುದು ಹಾಗೂ ನಗರಾದ್ಯಂತ ಏಕರೂಪದ ವಿನ್ಯಾಸ ಮಾನದಂಡ ರೂಪಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!