ಸಿಸಿಟಿವಿ ದೃಶ್ಯ 
ರಾಜ್ಯ

ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ ಬೇಧಿಸಿದ ಪೊಲೀಸರು; ಕಿರಾತಕರು ಕೊನೆಗೂ ಅಂದರ್!

ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲೇ ಎಲ್ಲೆಂದರಲ್ಲಿ ಬೇಕೆಂದೇ ಕೆಜಿಗಟ್ಟಲ್ಲೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಬೇಧಿಸಿದ್ದು,ಗುರುವಾರ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ.

ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ತಮ್ಮ ಅಂಗಡಿಗೆ ವ್ಯಾಪಾರ ಹೆಚ್ಚಿಸಿಕೊಳ್ಳುವ ದುರಾಸೆಯಿಂದ, ಇವರು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ಹೋಗುತ್ತಿದ್ದರು. ಸವಾರರು ಪಂಚರ್ ಆದ ವಾಹನಗಳನ್ನು ತಳ್ಳಿಕೊಂಡು ಬಂದಾಗ ರಸ್ತೆ ಬದಿಯಲ್ಲೇ ಪ್ರತ್ಯಕ್ಷರಾಗಿ ಪಂಚರ್ ಹಾಕಿಕೊಡುವ ನಾಟಕವಾಡುತ್ತಿದ್ದರು.

ತಮ್ಮ ಬ್ಯೂಸಿನೆಸ್‌ಗಾಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಕಿಡಿಗೇಡಿಗಳು, ಬೈಕ್‌ನಲ್ಲಿ ಹೋಗುತ್ತಾ ಮೊಳೆಗಳನ್ನು ರಸ್ತೆಯ ಬದಿ ಚೆಲ್ಲುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸತತವಾಗಿ ವಾಹನಗಳು ಪಂಚರ್ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಾಗೃತರಾದ ಬೆಂಗಳೂರು ಟ್ರಾಫಿಕ್ ಪೊಲೀಸರು, ಆ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿ ಅಪಾರ ಪ್ರಮಾಣದ ಮೊಳೆಗಳು ಪತ್ತೆಯಾಗಿದ್ದವು. ತಕ್ಷಣವೇ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ, ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಗೆ ಮೊಳೆ ಚೆಲ್ಲುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದ್ದವು.

ಸಿಸಿಟಿವಿ ವೀಡಿಯೋ ಸಾಕ್ಷ್ಯಾಧಾರಗಳ ಬೆನ್ನತ್ತಿದ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

'ನಾನು ಬದುಕಬೇಕು, ಸಾಯೋದಕ್ಕೆ ಇಷ್ಟ ಇಲ್ಲ': ಕೃಷಿ ತಾಪಂಡ ವಿಚಾರದಲ್ಲಿ ಮೌನ ಮುರಿದ ಅರವಿಂದ್ ರೆಡ್ಡಿ; ಶಾಕಿಂಗ್ ಹೇಳಿಕೆ

ಕಾವೇರಿ ನೀರಿನ ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರಿಗೆ ಆಹ್ವಾನ!

ರೈಲಿನ ಮೇಲೆ ಬಿದ್ದ 11,000 ವೋಲ್ಟ್ ವಿದ್ಯುತ್ ತಂತಿ, ಶಾರ್ಟ್ ಸರ್ಕ್ಯೂಟ್; ಓಡಿದ ಪ್ರಯಾಣಿಕರು, Video Viral

ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!