ವಿನಯ್ ಕುಲಕರ್ಣಿ  
ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಿಕ್ಷೆ ಅಮಾನತನಲ್ಲಿಟ್ಟು ಹೈಕೋರ್ಟ್ ಜಾಮೀನು ಮಂಜೂರು

ಪ್ರಕಕಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ತಮಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಬೆಂಗಳೂರು: ಧಾರವಾಡದ ಹೈಪ್ರೊಫೈಲ್ ಮರ್ಡರ್ ಕೇಸ್ ನಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣುಗೆ ಇಂದು ಶುಕ್ರವಾರ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದೆ.

ಪ್ರಕಕಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ತಮಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಹೈಕೋರ್ಟ್ ಇಂದು ಮಹತ್ವದ ಮಧ್ಯಂತರ ತೀರ್ಪು ನೀಡಿದೆ.

10 ಮಂದಿಗೂ ಜಾಮೀನು

ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚನ್ನಕೇಶವ ಟಿಂಗರಿಕರ್‌ಗೂ ಜಾಮೀನು ದೊರೆತಿದೆ.

ವಿನಯ್​ ಕುಲಕರ್ಣಿಗೆ ಬಿಗ್ ರಿಲೀಫ್​

ವಿನಯ್​ ಕುಲಕರ್ಣಿಗೆ ಬಿಗ್​ ರಿಲೀಫ್​ ಸಿಕ್ಕಿದ್ದು, ಜೀವಾವದಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದೆ. ಶಿಕ್ಷೆ ಅಮಾನತನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ನೀಡಲಾಗಿದೆ. ನ್ಯಾಯಮೂರ್ತಿ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ಇದರಿಂದ ಅವರ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಸಿಕ್ಕಿದೆ.

ಜಾಮೀನಿನ ಪ್ರಮುಖ ಷರತ್ತುಗಳು

  • ಜಾಮೀನು ಮೊತ್ತ: 5 ಲಕ್ಷ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸಬೇಕು.

  • ನ್ಯಾಯಾಲಯದ ಕ್ರಮ: ವಿಭಾಗೀಯ ಪೀಠವು ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶದ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.

  • ಧಾರವಾಡ ಪ್ರವೇಶ: ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

  • ಹೈಕೋರ್ಟ್ ಅನುಮತಿ ಇಲ್ಲದೆ ಭಾರತದಿಂದ ಹೊರಗೆ ಪ್ರಯಾಣಕ್ಕೆ ಅವಕಾಶವಿಲ್ಲ.

2016ರ ಜೂನ್‌ನಲ್ಲಿ ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಯಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು.

ಇದೀಗ ಹೈಕೋರ್ಟ್ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿರುವುದರಿಂದ, ವಿನಯ್ ಕುಲಕರ್ಣಿಗೆ ಅವರ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ಪೂರ್ಣಗೊಳ್ಳುವವರೆಗೆ ಮಧ್ಯಂತರ ಕಾನೂನು ಪರಿಹಾರ ದೊರೆತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!