ಡಿ.ಕೆ ಶಿವಕುಮಾರ್ ಮತ್ತು ಸಮರ್ಥ್ ಶಾಮನೂರು online desk
ರಾಜ್ಯ

ಸಚಿವ ಸ್ಥಾನ ಸಿಕ್ಕರೆ ಹಿಂದೆ ಸರಿಯಲ್ಲ; ಅಧಿಕಾರವಿದ್ದರೆ ಜನರ ಕೆಲಸಕ್ಕೆ ವೇಗ: ಸಮರ್ಥ್ ಶಾಮನೂರು

ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಯುವ ಶಾಸಕ ಸಮರ್ಥ ಶಾಮನೂರು ಅವರೂ ಸೇರ್ಪಡೆಯಾಗಿದ್ದಾರೆ.

ದಾವಣಗೆರೆ: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ವೇದಿಕೆ ಸಜ್ಜಾಗುತ್ತಿರುವ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸತೊಡಗಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಯುವ ಶಾಸಕ ಸಮರ್ಥ ಶಾಮನೂರು ಅವರೂ ಸೇರ್ಪಡೆಯಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವುಗೊಂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದಿರುವ ಸಮರ್ಥ್ ಶಾಮನೂರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೊಸ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಮರ್ಥ್, ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವುದಾಗಿ ಹೇಳುವ ಮೂಲಕ ಅವರು ತಮ್ಮ ರಾಜಕೀಯ ಆಕಾಂಕ್ಷೆಯನ್ನು ಬಹಿರಂಗಪಡಿಸಿದ್ದಾರೆ.

'ಸಚಿವ ಸ್ಥಾನ ಸಿಕ್ಕರೆ ನಾನು ಖಂಡಿತವಾಗಿಯೂ ಹಿಂದೆ ಸರಿಯುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ರಾಜ್ಯ ಮತ್ತು ಕೇಂದ್ರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರ ಹಾಗೂ ಜಿಲ್ಲೆಯ ಕೆಲಸಗಳನ್ನು ಮಾಡುವುದಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಅಧಿಕಾರವಿದ್ದರೆ ಜನರ ಕೆಲಸಗಳನ್ನು ಇನ್ನಷ್ಟು ವೇಗವಾಗಿ ಮಾಡಬಹುದು' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ: FIR ದಾಖಲು!

ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಆಪ್ತ ಸಹಾಯಕನ ಮನೆ ಮೇಲೆ ED ದಾಳಿ; ಪಕ್ಷಕ್ಕೆ ಮುಜುಗರ ತಪ್ಪಿಸಲು ರಾಜಿನಾಮೆ- ಹರೀಶ್ ರಾವತ್

ಬೆಂಗಳೂರಿನ ಗುಂಡಿ ಮುಚ್ಚಲು 'ಜೆಟ್ ಪ್ಯಾಚರ್': ಪ್ರಾಯೋಗಿಕ ಕಾರ್ಯಾಚರಣೆ!

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು