ಯುಟಿ ಖಾದರ್ ರಾಜಿನಾಮೆ 
ರಾಜ್ಯ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ UT Khader ರಾಜೀನಾಮೆ

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸುತ್ತಿರುವ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಂಗಳೂರು ಶಾಸಕ ಯುಟಿ ಖಾದರ್ ಬುಧವಾರ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ ಎನ್ನಲಾಗಿದೆ.

ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್​​, 'ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಧನ್ಯವಾದ

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ ಯು.ಟಿ. ಖಾದರ್​​ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್​​ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್​​ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.

ಇನ್ನು ಯು.ಟಿ. ಖಾದರ್ ಸಚಿವರಾಗುವುದು ಖಚಿತವಾಗಿರುವ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಬಳಿ ಇರುವ ಖಾದರ್​ ನಿವಾಸಕ್ಕೆ ಆಗಮಿಸಿ ಹಲವರು ಶುಭ ಕೋರುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಅಜಿತ್ ಕುಮಾರ್ 'ಲಂಡನ್ ರೇಸ್' ನಲ್ಲೂ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ತಲಾ, ದಳಪತಿ ಫ್ಯಾನ್ಸ್ ಫುಲ್ ಖುಷ್! Video