ಡಿ.ಕೆ ಶಿವಕುಮಾರ್ 
ರಾಜ್ಯ

ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ: ಬುಧವಾರ ಸಚಿವರ ಪಟ್ಟಿ ಪ್ರಕಟ; ಡಿ.ಕೆ ಶಿವಕುಮಾರ್

ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ.

ಬೆಂಗಳೂರು: ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ" ಎಂದು ಕಾಂಗ್ರೆಸ್ಶಾ ಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ" ಎಂದು ತಿಳಿಸಿದರು.

ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಾಳೆ ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ ಆಗಮಿಸಬೇಕು.

ನಾನು ಸಚಿವ ಸಂಪುಟ ಸಭೆ ಮಾಡಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೀಳ್ಕೊಟ್ಟು ನಂತರ ಭಾರತ ಜೋಡೋ ಭವನದಲ್ಲಿ ಭೇಟಿ ಮಾಡುವೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video