ಡಿ ಕೆ ಶಿವಕುಮಾರ್  
ರಾಜ್ಯ

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ ಶಿವಕುಮಾರ್: ಬೆಂಗಳೂರಿನ ಅವರ ನಿವಾಸದ ಬಳಿ ಇಂದು ಬೆಳಗ್ಗೆ ಕಂಡುಬಂದದ್ದು ಹೀಗೆ.. Video

ನಿನ್ನೆಯಷ್ಟೇ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸ ಕಂಡುಬಂದದ್ದು ಹೀಗೆ.

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರ ನಿವಾಸ ಈಗ ಸದಾ ಚಟುವಟಿಕೆಯ ಕೇಂದ್ರ ಬಿಂದುವಾಗಿರುತ್ತದೆ. ಬೆಳಗ್ಗೆಯಿಂದ ರಾತ್ರಿಯವರೆಗೆ ಬಂದು ಹೋಗುವ ಜನ, ಅಭಿಮಾನಿಗಳು, ರಾಜಕೀಯ ನಾಯಕರು, ತಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಂಡು ಬರುವವರು ಹೀಗೆ ಒಂದಲ್ಲ...ಎರಡಲ್ಲ ಸದಾ ಗಿಜಿಗಿಡುತ್ತಿರುತ್ತದೆ.

ನಿನ್ನೆಯಷ್ಟೇ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸ ಕಂಡುಬಂದದ್ದು ಹೀಗೆ.

ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ನಿನ್ನೆ ಸಾಯಂಕಾಲ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಡಿ ಕೆ ಶಿವಕುಮಾರ್ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ ಹೇಳಿದ್ದಾರೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ವ್ಯಾಪ್ತಿಯ ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಪ್ರವಾಸ ಮಾಡಿ, ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್‌ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಸ್‌ಐಆರ್ ವಿಚಾರದಲ್ಲಿ ದೊಡ್ಡ ಸಮಸ್ಯೆಯಿದೆ, ಇದನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಎಚ್ಚರಿಸಿರುವ ಸಿಎಂ, ಚುನಾವಣಾ ವ್ಯವಸ್ಥೆಯ ಈ ಪ್ರಮುಖ ಪ್ರಕ್ರಿಯೆಯ ಕಡೆಗೆ ನಾಯಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಪಾರದರ್ಶಕವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಡಿಕೆಶಿ ಸೂಚನೆ​​

'ನಾನೇರಿದೆತ್ತರಕ್ಕೆ ನೀನೇರಬಲ್ಲೆಯಾ'? ನಿರ್ಗಮನಕ್ಕೂ ಉನ್ನತ ಹುದ್ದೆ ಅಲಂಕರಿಸಿ ವಿರೋಧಿಗಳಿಗೆ ಸೆಡ್ಡು ಹೊಡೆದ 'ರಾಜನೀತಿಜ್ಞ' ಸಿದ್ದರಾಮಯ್ಯ!

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಮುಂದಿನ ಶತಮಾನ ಯಾರಿಗೆ ಸೇರಿದ್ದು? ನಿರ್ಧರಿಸುವುದು R&D ಮೇಲಿನ ಹೂಡಿಕೆ! (ಹಣಕ್ಲಾಸು)

ಕುಸ್ತಿಪಟು ವಿನೇಶ್ ಫೋಗಟ್ ಪ್ರಕರಣ; WFIಗೆ ಭಾರೀ ಹಿನ್ನೆಡೆ, ಅರ್ಜಿ ಅನಗತ್ಯ ಎಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್..!

SCROLL FOR NEXT