ಸಾಂದರ್ಭಿಕ ಚಿತ್ರ 
ರಾಜ್ಯ

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ 20 ದಿನಗಳ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಕೃತ ಆದೇಶ ಹೊರಡಿಸಿದ್ದು, ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ಪ್ರಕರಣ ದಾಖಲಾಗಿ ದಂಡ ಬಾಕಿ ಉಳಿಸಿಕೊಂಡಿರುವವರು ಶೇ. 50 ರಷ್ಟು ದಂಡ ಪಾವತಿ ಮಾಡಿ, ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಆದೇಶ

ಇನ್ನು ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ಮೇ 2026 ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ ಮೇ, 2026ರ ನಂತರದ ಕೇಸ್​ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!