ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. 
ರಾಜ್ಯ

Rajya sabha election: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ನಾಮಪತ್ರ ಸಲ್ಲಿಕೆ

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿ ಖಾನ್‌ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿ ಖಾನ್‌ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಮತ್ತು ಹಲವಾರು ಸಚಿವರು ಈ ವೇಳೆ ಇದ್ದರು.

ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸತ್ತಿನ ಮೇಲ್ಮನೆಯಲ್ಲಿ ಅವರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದೆ.

ವಿಧಾನಸಭೆಯಲ್ಲಿ ಈಗಿರುವ ಸದಸ್ಯರ ಬಲದಲ್ಲಿ ಕಾಂಗ್ರೆಸ್ 3 ಹಾಗೂ ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದಾಗಿದೆ.

ನಾಮಪತ್ರ ಸಲ್ಲಿಸಲು ಜೂನ್ 8 ಕೊನೆ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು 10 ಕೊನೆ ದಿನವಾಗಿದೆ. ಮತದಾನ ನಡೆದ ಜೂನ್ 18 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಬೆದರಿಕೆಗೆ Iran ತಿರುಗೇಟು: 'ಕಣ್ಣಿಗೆ ಕಣ್ಣು' ಉತ್ತರ, ಮೂಲಸೌಕರ್ಯಗಳ ಮೇಲೆ ದಾಳಿಯಾದರೆ ಪ್ರಬಲ ಪ್ರತೀಕಾರ ಎಂದ ಟೆಹ್ರಾನ್

'ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವು ಸಿದ್ಧ': ಕೇಂದ್ರ ಆರೋಗ್ಯ ಸಚಿವ JP Nadda

Jantar Mantar ನಲ್ಲಿ ಮತ್ತೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಕಲ್ಲು ತೂರಾಟ, ಟೋಲ್ಸ್ಟಾಯ್ ಮಾರ್ಗ್‌, ಸಂಸದ್ ಮಾರ್ಗ್‌ನಲ್ಲಿ ಉದ್ವಿಗ್ನತೆ, 5 ಪೊಲೀಸರಿಗೆ ಗಾಯ

ಕರ್ನಾಟಕದಲ್ಲಿ 44.84 ಲಕ್ಷ ಮತದಾರರ ಹಕ್ಕಿಗೆ ಕುತ್ತು? ಪಟ್ಟಿಯಿಂದ ಕೈಬಿಡುವ ಸಾಧ್ಯತೆ!

ಉಪವಾಸ ಅಂತ್ಯಗೊಳಿಸುವುದಕ್ಕೆ ಷರತ್ತು ವಿಧಿಸಿದ ಸೋನಮ್ ವಾಂಗ್‌ಚುಕ್