ಎಸಿ ಹೆಲ್ಮೆಟ್ 
ರಾಜ್ಯ

ಬೆಂಗಳೂರು ಸಂಚಾರ ಪೊಲೀಸರ ತಲೆ ತಂಪಾಗಿಸಲು ಎಸಿ ಹೆಲ್ಮೆಟ್‌!

ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶದಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ಅನುವಾಗುವಂತೆ ಸಂಚಾರ ಪೊಲೀಸರಿಗೆ ಹೀಟ್–ಹೆಲ್ತ್ ಪ್ರೋಟೋಕಾಲ್ ಯೋಜನೆಯಡಿ ಕೂಲಿಂಗ್‌ ಕಿಟ್‌ ನೀಡಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ನೇತೃತ್ವದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಸಂಚಾರ ಪೊಲೀಸ್ ಸಿಬ್ಬಂದಿಗೆ ಬಿಸಿಲಿನ ಪರಿಣಾಮಗಳು, ಆರೋಗ್ಯದ ಮೇಲೆ ಉಂಟಾಗುವ ತೊಂದರೆಗಳು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯ ರಕ್ಷಣೆಗಾಗಿ ‘ಎಸಿ ಹೆಲ್ಮೆಟ್ ಗಳನ್ನು ವಿತರಿಸಲಾಯಿತು.

ಸಿ40, ಸೆನ್ಸಿಂಗ್‌ ಲೋಕಲ್‌ ಹಾಗೂ ಹಸಿರು ದಳ ಸಂಸ್ಥೆಗಳ ಸಹಯೋಗದಲ್ಲಿ ‘ಹೀಟ್–ಹೆಲ್ತ್ ಪ್ರೋಟೋಕಾಲ್’ ಯೋಜನೆ ಆರಂಭಿಸಲಾಗಿದೆ. ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

ಉತ್ತರ ನಗರ ಪಾಲಿಕೆಯ ಪೌರಕಾರ್ಮಿಕರಿಗೆ ಇದೇ ಮಾದರಿಯ ಆರೋಗ್ಯ ರಕ್ಷಣಾ ಕಿಟ್‌ಗಳನ್ನು ವಿತರಿಸಲಾಗಿದೆ. ಇದೀಗ ಸಂಚಾರ ಪೊಲೀಸ್ ಸಿಬ್ಬಂದಿಗೂ ವಿತರಿಸಲಾಗುತ್ತಿದೆ. ಕಿಟ್‌ಗಳ ಬಳಕೆ ಮತ್ತು ಪರಿಣಾಮಕಾರಿತ್ವದ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗೆ ಈ ಸೌಲಭ್ಯವನ್ನು ವಿಸ್ತರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ಕಾಪಾಡಲು ಈ ಕಿಟ್‌ಗಳು ಸಹಕಾರಿಯಾಗಲಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ರಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಕೆಲವು ಸರ್ಕಾರಿ ಕಚೇರಿಗಳಲ್ಲಿ ಶಾಖ ನಿಯಂತ್ರಣ ಮತ್ತು ತಂಪು ವಾತಾವರಣ ಕಲ್ಪಿಸುವ ವ್ಯವಸ್ಥೆಗಳನ್ನು ರೂಪಿಸುವ ಕುರಿತು ಯೋಜನೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌