ಡಿ.ಕೆ ಶಿವಕುಮಾರ್ 
ರಾಜ್ಯ

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ: ಸಿಎಂ ಡಿ.ಕೆ. ಶಿವಕುಮಾರ್

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದು, ಅಪಾರ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ

ಬೆಂಗಳೂರು: ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, "ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ ಈಡೇರಿಸಿದ್ದೇವೆ. ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ ಇಟ್ಟಿದ್ದು, ಮೊದಲ ದಿನದಿಂದ ನಿರೀಕ್ಷೆಗಳಿವೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ನನ್ನನ್ನು ಪ್ರಶ್ನೆ ಮಾಡಿದಾಗ, ನನ್ನ ಶಾಸಕರ ಸಂಖ್ಯಾಬಲ 136 ಎಂದು ಹೇಳಿದ್ದೆ" ಎಂದು ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಖರ್ಗೆ ಅವರ ನಾಮಪತ್ರ ಸಲ್ಲಿಕೆ ನಂತರ ಇತರೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ" ಎಂದು ಮಾಹಿತಿ ನೀಡಿದರು.

ಈಗ ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಹಾಗೂ ಬಿಕೆ ಜೋಡಿ ನೇತೃತ್ವವಿದೆ ಎಂದು ಕೇಳಿದಾಗ, "ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕರು, ಕಾರ್ಯಕರ್ತರು. ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ನಾಳೆ ಕೂಡ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದು, ಅಪಾರ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ

ಕರ್ತವ್ಯ. ನಮ್ಮ ಆಡಳಿತವನ್ನು ರಾಜ್ಯದ ಜನ ಗೌರವಿಸಿ, ಬೆಂಬಲಿಸುವ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವುದು ನಮ್ಮ ಗುರಿ ಎಂದರು.ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆ ಬಗ್ಗೆ ಕೇಳಿದಾಗ, "ನಾವು ನಮ್ಮ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದು, ಹೊರಗಿನವರಿಗೆ ಹೇಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯ? ನಮ್ಮ ಯೋಜನೆಗಳು ಕೇವಲ ಕನ್ನಡಿಗರಿಗೆ ಮಾತ್ರ. ಬೇರೆ ರಾಜ್ಯದವರಿಗೆ ನೀಡಲು ಆಗುವುದಿಲ್ಲ. ನೀವು ಕೇವಲ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೀರಿ ಎಂದು ಬಾಲಕ ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದರು. ಈಗ ಒಂದನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಲಾಗುವುದು.

"ಈ ಕಾರ್ಯಕ್ರಮವನ್ನು ಬೇರೊಂದು ದಿನ ನಿಗದಿ ಮಾಡಲಾಗುವುದು. ಸಮಯದ ಕೊರತೆಯಿಂದ ನಾವು ಈ ಹಿಂದೆ ನಿಗದಿ ಮಾಡಿದ ಕಾರ್ಯಕ್ರಮ ಮುಂದೂಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

13 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ CM ಡಿಕೆ ಶಿವಕುಮಾರ್; ಯಾರಿಗೆ ಯಾವ ಖಾತೆ?

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಮಸೂದೆ ಮಂಡನೆಗೆ ಮತ್ತೆ ಕೇಂದ್ರ ಸಿದ್ಧತೆ: TMC-DMK ಬೆಂಬಲ ಸಾಧ್ಯತೆ?

Cricket: IPL 2026 ಮುಕ್ತಾಯದ ಬೆನ್ನಲ್ಲೇ ಹೊಸ ವಿವಾದ, MI ಅರ್ಧ ಹಣ ಮಾತ್ರ ಕೊಟ್ರು; Mitchell Santner ಹೊಸ ಬಾಂಬ್

SCROLL FOR NEXT