ಡಿಕೆ ಶಿವಕುಮಾರ್, ರಾಹುಲ್ ಗಾಂಧಿ 
ರಾಜ್ಯ

ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ: ರಾಹುಲ್ ಗಾಂಧಿ ಖಡಕ್ ಸೂಚನೆ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್​​ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇದು ಸದ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.

ಇನ್ನು ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವರು ಅಸಾಧಾನಗೊಂಡಿರುವ ವಿಚಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​​ ಸುರ್ಜೆವಾಲಾಗೆ ರಾಹುಲ್​ ಗಾಂಧಿಗೆ ಮಾಹಿತಿ ನೀಡಿದರು. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಹುಲ್ ಗಾಂಧಿ, ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ ಎಂದು ಕಡ್ಡಿಮುರಿದಂತೆ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿದ ಬಳಿಕ ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನ ತಣಿಸಲು ಸಿಎಂ ಡಿಕೆ ಶಿವಕುಮಾರ್​ ಅವರು ರಾಮಲಿಂಗಾರೆಡ್ಡಿ ಸಂಪರ್ಕಕ್ಕೆ ಪ್ರಯತ್ನಿಸಿದ್ದು ಆದರೆ ರಾಮಲಿಂಗಾರೆಡ್ಡಿ ಮೊಬೈಲ್​ ಸ್ವಿಚ್​ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!