ಕೆಎಸ್ಆರ್‌ಟಿಸಿ ಬಸ್ ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ!

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ನಿರ್ಧರಿಸಲಾಯಿತು.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತರುವಂತೆ ಕರ್ನಾಟಕ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ನಿರ್ಧರಿಸಲಾಯಿತು.

ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇದಕ್ಕಾಗಿ ಅರ್ಜಿ ವಿತರಣೆ ಬಗ್ಗೆ ಸಾರಿಗೆ ಇಲಾಖೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

'ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ಬಸ್‌ಗಳಲ್ಲಿ ಪ್ರಯಾಣಿಸುವ ಕರ್ನಾಟಕದ ಎಲ್ಲ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸಲು ಸರ್ಕಾರ ತಾತ್ವಿಕವಾಗಿ ಅನುಮೋದನೆ ನೀಡಿದೆ' ಎಂದು ಹೇಳಿಕೆ ತಿಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ನಿರ್ವಹಿಸುವ ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದು.

ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!

ಪಾಕಿಸ್ತಾನಕ್ಕೆ Iran ರಹಸ್ಯ ಸಂದೇಶ: Asim Munir ಜೊತೆ ಮಹತ್ವದ ಮಾತುಕತೆ, Khamenei ಕಳುಹಿಸಿದ ಆ ರಹಸ್ಯ ಪತ್ರದಲ್ಲೇನಿದೆ?