ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: 18 ಸಾವಿರ ಲಂಚಕ್ಕೆ ಬೇಡಿಕೆ; ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ ಪೊಲೀಸರು!

ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ವಿಜಯಪುರದ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ವಿಜಯಪುರ: ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ವಿಜಯಪುರದ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (KBJNL) ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂಪಾಯಿ ಲಂಚಕ್ಕೆ KBJNL ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂಪಾಯಿಗೆ ಹಾಗೂ ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಲಂಚಕೋರರನ್ನ ಬಂಧಿಸಿದ್ದಾರೆ. ಈ ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್

'3 ಬಾರಿ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ; ಅರ್ಥಪೂರ್ಣ ಮಾತುಕತೆಗೆ ಏಕಿಷ್ಟು ತಡ?': ಕೇಂದ್ರಸರ್ಕಾರಕ್ಕೆ Annamalai ಪ್ರಶ್ನೆ!

2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ 'ಸುಪ್ರೀಂ' ಅಸ್ತು!

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮೋಹನ್ ಲಾಲ್ ಪುತ್ರಿ; ತುಡಕ್ಕಂ ಚಿತ್ರ ಬಹಿಷ್ಕರಿಸಲು ನೆಟ್ಟಿಗರಿಂದ ಕರೆ!

ಸಂಪುಟ ವಿಸ್ತರಣೆಗೂ ತಟ್ಟಿದ ದೆಹಲಿ ಪ್ರತಿಭಟನೆಯ ಬಿಸಿ; ಮತ್ತೆ ಮುಂದೂಡಿಕೆ, ಇನ್ನೂ ಇಬ್ಬರಿಗೆ ಡಿಸಿಎಂ ಪಟ್ಟ?