ಸಾಂದರ್ಭಿಕ ಚಿತ್ರ 
ರಾಜ್ಯ

ಕರಾವಳಿಗೆ ಮುಂಗಾರು ಪ್ರವೇಶ: ಮೊದಲ ಮಳೆಯಲ್ಲೇ ಹೆದ್ದಾರಿ, ಏರ್ಪೋರ್ಟ್‌ ರನ್‌ ವೇ ಜಲಾವೃತ!

ಮೂಡುಬಿದ್ರಿಯ ಮಿಜಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದಿದ್ದು, ಕುದುರೆಮುಖ ವನ್ಯಜೀವಿ ಅಭಯಾರಣ್ಯದ ಬೆಳ್ತಂಗಡಿ ಬಳಿಯ ಬಂಡಾಜೆ ಅರಣ್ಯದಲ್ಲಿ ಭೂಕುಸಿತ ಸಂಭವಿಸಿದೆ ಎಂದು ವರದಿಯಾಗಿದೆ.

ಮಂಗಳೂರು: ಕರಾವಳಿಗೆ ಅಧಿಕೃತವಾಗಿ ಮುಂಗಾರು ಮಾರುತಗಳು ಪ್ರವೇಶಿಸಿವೆ. ಮುಂದಿನ ನಾಲ್ಕೈದು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಮುಂದುವರಿಯಲಿದ್ದು, ಮಳೆಯ ಪ್ರಮಾಣದಲ್ಲಿ ಹೆಚ್ಚಳ ಸಾಧ್ಯತೆಯಿದೆ.

ಶುಕ್ರವಾರ ಬೆಳಗ್ಗೆಯಿಂದಲ್ಲೇ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ರಸ್ತೆಗಳಲ್ಲೆವೂ‌ ತುಂಬಿ ಹರಿಯುತ್ತಿವೆ. ಮುಂಗಾರಿನ ಮೊದಲ ಭರ್ಜರಿ ಮಳೆಗೆ ಮಂಗಳೂರು ಸೇರಿದಂತೆ ಕರಾವಳಿಯ ಗ್ರಾಮಾಂತರ ಭಾಗ ತುಸು ಸ್ತಬ್ಧಗೊಂಡಿತ್ತು. ಬೆಳಗ್ಗಿನ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ನಗರದ ಹೃದಯಭಾಗವಾದ ಕೋಡಿಯಾಲ್‌ಬೈಲ್‌ ರಸ್ತೆ ಬಹುತೇಕ ಕಡೆ ಸಂಪೂರ್ಣ ಜಲಾವೃತಗೊಂಡಿತು.

ಮೂಡುಬಿದ್ರಿಯ ಮಿಜಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದಿದ್ದು, ಕುದುರೆಮುಖ ವನ್ಯಜೀವಿ ಅಭಯಾರಣ್ಯದ ಬೆಳ್ತಂಗಡಿ ಬಳಿಯ ಬಂಡಾಜೆ ಅರಣ್ಯದಲ್ಲಿ ಭೂಕುಸಿತ ಸಂಭವಿಸಿದೆ ಎಂದು ವರದಿಯಾಗಿದೆ.

ಕಂಕನಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿಗಳ ಹೂಳೆತ್ತದ ಕಾರಣ, ಮಳೆನೀರು ಸರಾಗವಾಗಿ ಹರಿದುಹೋಗದೆ ರಸ್ತೆಯಲ್ಲಿ ಸಾಗುತ್ತಿತ್ತು. ಇದರಿಂದಾಗಿ ಪಾದಚಾರಿಗಳು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುವಂತಾಯಿತು.

ನಿರಂತರ ಮಳೆಯ ಹೊಡೆತಕ್ಕೆ ದಂಬೇಲ್‌ ಸಮೀಪ ಮನೆಯೊಂದರ ತಡೆಗೋಡೆ ರಸ್ತೆಗೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಂತೂರು, ಪಡೀಲ್‌, ಪಂಪ್‌ವೆಲ್‌ ಹಾಗೂ ಕೆಪಿಟಿ ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ಸಾರ್ವಜನಿಕರು ರಸ್ತೆಯಲ್ಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್