ಸಾಗರ್ ಮಾದರ(15), ಪ್ರವೀಣ್ ಮಾದರ(13) 
ರಾಜ್ಯ

ಬೆಳಗಾವಿ: ಈಜಲು ಹಳ್ಳಕ್ಕೆ ಇಳಿದಿದ್ದ ಅಣ್ಣ-ತಮ್ಮ ಇಬ್ಬರೂ ನೀರುಪಾಲು; ಪೋಷಕರ ಆಕ್ರಂದನ

ಮೃತ ಬಾಲಕರನ್ನು ಧರ್ಮಟ್ಟಿ ಗ್ರಾಮದ ಸಾಗರ್ ಮಾದರ(15), ಪ್ರವೀಣ್ ಮಾದರ(13) ಎಂದು ಗುರುತಿಸಲಾಗಿದ್ದು, ಇಬ್ಬರೂ ಹಳ್ಳದಲ್ಲಿ ಈಜಲು ತೆರಳಿದ್ದರು.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಈಜಲು ಹಳ್ಳಕ್ಕೆ ಇಳಿದಿದ್ದ ಅಣ್ಣ- ತಮ್ಮ ಇಬ್ಬರೂ ನೀರುಪಾಲಾಗಿದ್ದಾರೆ.

ಮೃತ ಬಾಲಕರನ್ನು ಧರ್ಮಟ್ಟಿ ಗ್ರಾಮದ ಸಾಗರ್ ಮಾದರ(15), ಪ್ರವೀಣ್ ಮಾದರ(13) ಎಂದು ಗುರುತಿಸಲಾಗಿದ್ದು, ಇಬ್ಬರೂ ಹಳ್ಳದಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿಗಿಳಿದಾಗ ಪ್ರವೀಣ್ ಮುಳುಗಿದ್ದಾನೆ. ಇದನ್ನು ಗಮನಿಸಿ ಆತನ ರಕ್ಷಣೆಗೆ ಸಾಗರ್ ತೆರಳಿದ್ದು, ಆತನೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಸ್ಥಳೀಯರು ಹಾಗೂ ಪೊಲೀಸರು ನೀರಿನಿಂದ ಹೊರತೆಗೆದಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ