ಬೆಂಗಳೂರು: ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾದೊಂದಿಗೆ ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬೆಂಗಳೂರು ಕಸ್ಟಮ್ಸ್, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 10.20 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಬೆಲೆ ₹3.57 ಕೋಟಿ ಆಗಿದೆ ಎಂದು ತಿಳಿಸಿದೆ.
ಜೂನ್ 4 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 6.66 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಪ್ರಕರಣಗಳಲ್ಲಿ, ಗುರುತನ್ನು ಬಹಿರಂಗಪಡಿಸದ ಆರೋಪಿಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.