ಹೊಸಪೇಟೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ  
ರಾಜ್ಯ

ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿ: ಹೊಸಪೇಟೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಈ ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು.

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಡಿಎಚ್‌ಒ ಕಚೇರಿ ಸಮೀಪ ಆಶಾ ಕಾರ್ಯಕರ್ತೆಯರು ತಮ್ಮ ಐದು ತಿಂಗಳ ಬಾಕಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ನಿನ್ನೆ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಮೋದ್, ರಾಜ್ಯದಾದ್ಯಂತ ಸದಸ್ಯರು ನಡೆಸಿದ ಹೋರಾಟದ ಬಳಿಕ 260 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ 5.6 ಕೋಟಿ ರೂಪಾಯಿ ವಿಜಯನಗರ ಜಿಲ್ಲೆಗೆ ಮೀಸಲಿಡಲಾಗಿದೆ. ಆದರೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪ್ರೋತ್ಸಾಹಧನ ಸೇರಿದಂತೆ ವೇತನ ಇನ್ನೂ ಕಾರ್ಯಕರ್ತೆಯರ ಖಾತೆಗೆ ಜಮೆಯಾಗಿಲ್ಲ ಎಂದು ದೂರಿದರು.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವ ಬಗ್ಗೆ ಸರ್ಕಾರ ಯಾವುದೇ ಗಮನ ಹರಿಸಿಲ್ಲ. ಸರ್ಕಾರ ಇನ್ನಷ್ಟು ವಿಳಂಬ ಮಾಡಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಗೌರಮ್ಮ, ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎಂಬ ಕಾರಣ ನೀಡಿ ಆಶಾ ಪೋರ್ಟಲ್‌ನಲ್ಲಿದ್ದ ಸುಮಾರು ಒಂಬತ್ತು ಘಟಕಗಳನ್ನು ರಾಜ್ಯ ಸರ್ಕಾರ ನಿಷ್ಕ್ರಿಯಗೊಳಿಸಿದೆ ಎಂದು ಹೇಳಿದರು. ಇದರಿಂದ ವಾರದ ಲಸಿಕಾ ಕಾರ್ಯಕ್ರಮ ಸೇರಿದಂತೆ ಒಂಬತ್ತು ಚಟುವಟಿಕೆಗಳಿಗೆ ದೊರೆಯುತ್ತಿದ್ದ ಪ್ರೋತ್ಸಾಹಧನ ಆಶಾ ಕಾರ್ಯಕರ್ತೆಯರಿಗೆ ಸಿಗುವುದಿಲ್ಲ. ಆದ್ದರಿಂದ ಈ ಚಟುವಟಿಕೆಗಳನ್ನು ಮುಂದುವರಿಸದಿರಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಎಲ್.ಆರ್. ಶಂಕರ್, ಎರಡು ತಿಂಗಳ ಪ್ರೋತ್ಸಾಹಧನವನ್ನು ಮುಂದಿನ ಎರಡು ತಿಂಗಳೊಳಗೆ ಬಿಡುಗಡೆ ಮಾಡಲಾಗುವುದು ಹಾಗೂ ಉಳಿದ ಮೊತ್ತವನ್ನು 20 ದಿನಗಳೊಳಗೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಪ್ಪಂದಕ್ಕೆ ಸಹಿ ಹಾಕಿದ ಮಾತ್ರಕ್ಕೆ ಹಣ ನೀಡಿದ್ದೇವೆ ಎಂದಲ್ಲ': ಇರಾನ್ ಮಾತುಕತೆ ಕುರಿತು ಅಮೆರಿಕ ಉಪಾಧ್ಯಕ್ಷ JD Vance ಸ್ಪಷ್ಟನೆ

ಭಾರತೀಯ ಹಡಗುಗಳ ಮೇಲೆ ನಡೆದಿದ್ದು 'ಇರಾನ್ ದಾಳಿ- ಟ್ರಂಪ್; ಪ್ರಸ್ತಾವಿತ ಕದನ ವಿರಾಮ ಒಪ್ಪಂದದ ಆವೃತ್ತಿ ಅಲ್ಲಗಳೆದ US ಅಧ್ಯಕ್ಷ!

ಭಾರತೀಯ ಹಡಗಿನ ಮೇಲೆ ಅಮೆರಿಕ ದಾಳಿ ಖಂಡಿಸಿದ ಇರಾನ್

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

SCROLL FOR NEXT