ಭಾರತೀಯ ರೈಲು 
ರಾಜ್ಯ

ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ; ಸಾಮರ್ಥ್ಯ ಹೆಚ್ಚಿಸಲು 162 ಕೋಟಿ ರೂ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!

ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್‌ಗಳಲ್ಲಿ ಒಂದಾಗಿದೆ.

ಬೆಂಗಳೂರು: ಕರ್ನಾಟಕದ ಅತ್ಯಂತ ಬ್ಯುಸಿ ರೈಲು ಮಾರ್ಗಗಳಲ್ಲಿ ಒಂದಾದ ಬೆಂಗಳೂರು-ತುಮಕೂರು ರೈಲು ಮಾರ್ಗದ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಭಾರತೀಯ ರೈಲ್ವೆ 162.57 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಿದೆ.

ಈ ಯೋಜನೆಯಡಿ ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿರುವ ಬೆಂಗಳೂರು-ತುಮಕೂರು ವಿಭಾಗದ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಮೇಲ್ದರ್ಜೆಗೇರಿಸಲಾಗುತ್ತದೆ.

ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್‌ಗಳಲ್ಲಿ ಒಂದಾಗಿದೆ.

ಈ ಮಾರ್ಗವು ಪುಣೆ-ಹುಬ್ಬಳ್ಳಿ-ಚಿಕ್ಜಾಜೂರು-ಬೀರೂರು-ತುಮಕೂರು-ಬೆಂಗಳೂರು-ಸೇಲಂ-ಕನ್ನಿಯಾಕುಮಾರಿ ರೈಲು ಕಾರಿಡಾರ್‌ನ ಭಾಗವಾಗಿದ್ದು, ದೇಶದ ಪ್ರಮುಖ ಕೈಗಾರಿಕಾ ಹಾಗೂ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಪರ್ಕ ಮಾರ್ಗವಾಗಿದೆ.

ರೈಲ್ವೆ ಇಲಾಖೆ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಈ ಯೋಜನೆ ನೂತನ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆ ರೈಲುಗಳ ಕಾರ್ಯಾಚರಣೆಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯನ್ನು ಮತ್ತಷ್ಟು ಬಲಪಡಿಸಲಿದ್ದು, ಇದರಿಂದ ಈ ಮಾರ್ಗದಲ್ಲಿ ಹೆಚ್ಚು ಸಂಖ್ಯೆಯ ರೈಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ.

ಇದರ ಜೊತೆಗೆ, ಉದ್ದವಾದ ಪ್ರಯಾಣಿಕರ ರೈಲುಗಳು ಮತ್ತು ಹೆಚ್ಚಿನ ಸರಕು ಸಾಗಣೆ ಸಾಮರ್ಥ್ಯ ಹೊಂದಿರುವ ರೈಲುಗಳ ಸಂಚಾರಕ್ಕೂ ಇದು ನೆರವಾಗಲಿದೆ. ವಿದ್ಯುತ್ ಟ್ರಾಕ್ಷನ್ ಜಾಲದ ವಿಶ್ವಾಸಾರ್ಹತೆಯೂ ಹೆಚ್ಚಲಿದ್ದು, ರೈಲು ಸಂಚಾರದ ನಿರಂತರತೆಯನ್ನು ಸುಧಾರಿಸಲಿದೆ ಎಂದು ಮಾಹಿತಿ ನೀಡಿದೆ.

ಯೋಜನೆಯಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಆಗಾಗ ಉಂಟಾಗುವ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಯಾಣಿಕರ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕೆ ಯೋಜನೆ ನೆರವಾಗಲಿದ್ದು, ಕರ್ನಾಟಕ ಹಾಗೂ ದಕ್ಷಿಣ ಭಾರತದ ರೈಲು ಸಂಪರ್ಕ ವ್ಯವಸ್ಥೆಗೆ ಈ ಯೋಜನೆ ಮತ್ತಷ್ಟು ಬಲ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!