ಶಿವಾನಂದ ನೀಲಣ್ಣನವರ್, ಸನ್ನಿ ಲಿಯೋನ್ 
ರಾಜ್ಯ

Bollywood ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ CID ನೋಟಿಸ್!

ಕರ್ನಾಟಕ ಸಿಐಡಿ ಅಧಿಕಾರಿಗಳು ಬೆಳಗಾವಿಯ ಶಿವಾನಂದ ನೀಲಣ್ಣನವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಬೆಳಗಾವಿ: ಕರ್ನಾಟಕ ಸಿಐಡಿ ಅಧಿಕಾರಿಗಳು ಬೆಳಗಾವಿಯ ಶಿವಾನಂದ ನೀಲಣ್ಣನವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣದ ಒಂದು ಭಾಗವನ್ನು ಶಿವಾನಂದ ನೀಲಣ್ಣನವರ್ ಸನ್ನಿ ಲಿಯೋನ್ ಸೇರಿದಂತೆ ಹಲವು ನಟ-ನಟಿಯರಿಗೆ ವರ್ಗಾವಣೆ ಮಾಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದ್ದು ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ ಅವರು, ‘ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಸಾರ್ವಜನಿಕರ ಹಣವನ್ನು ಚಿತ್ರ ನಟಿಯರಿಗೆ ನೀಡಿರುವ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್ ಸೇರಿದಂತೆ ಹಣ ಪಡೆದ ಇತರೆ ನಟ-ನಟಿಯರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ ಎಂದರು.

ಆರೋಪಿ ಶಿವಾನಂದ ನೀಲಣ್ಣವರ ಒಟ್ಟು 40,700 ಹೂಡಿಕೆದಾರರಿಂದ ಬರೊಬ್ಬರಿ 2,400 ಕೋಟಿ ರೂಪಾಯಿಗಳನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದಾನೆ. ಇದರಲ್ಲಿ ಸುಮಾರು 10,000 ಹೂಡಿಕೆದಾರರು ನೆರೆಯ ಮಹಾರಾಷ್ಟ್ರ ರಾಜ್ಯದವರಾಗಿದ್ದಾರೆ. ಸಂಗ್ರಹಿಸಿದ ಭಾರಿ ಮೊತ್ತದಲ್ಲಿ 540 ಕೋಟಿ ರೂಪಾಯಿಗಳನ್ನು ಆತ ಷೇರು ಪೇಟೆಯಲ್ಲಿ ಹೂಡಿಕೆ ಮಾಡಿ, ಅದರಲ್ಲಿ 170 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾನೆ. ಈ ವಂಚನೆಯ ಜಾಲವನ್ನು ನಡೆಸಲು ಆತ ಸುಮಾರು 30 ಬ್ಯಾಂಕ್ ಖಾತೆಗಳನ್ನು ಬಳಸಿದ್ದು, ಕೇವಲ ಒಂದು ಖಾತೆಯಲ್ಲೇ 36,200 ಪುಟಗಳಷ್ಟು ದೀರ್ಘವಾದ ವಹಿವಾಟಿನ ಇತಿಹಾಸ ಇರುವುದು ಪತ್ತೆಯಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿರೋಧ ಪಕ್ಷದ ಗದ್ದಲದ ನಡುವೆ ಸಂಸತ್ತಿನಲ್ಲಿ ಮೋದಿ ಸರ್ಕಾರದಿಂದ ಡೀಲಿಮಿಟೇಷನ್ ಮಸೂದೆಗೆ ಮರು ಜೀವ?

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

'ಟ್ರಬಲ್ ಶೂಟರ್‌' ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

'ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ, ಆದ್ರೂ...' : ಸುದೀರ್ಘ ದಾಂಪತ್ಯದ ರಹಸ್ಯ ಬಿಚ್ಚಿಟ್ಟ ಆರ್. ಮಾಧವನ್

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ: ನಮ್ಮ ಮೆಟ್ರೋಗೆ ಭಾರೀ ನಷ್ಟ; ಸಾಲ ಮರುಪಾವತಿ ಹೊರೆ ಹೆಚ್ಚಳ!

SCROLL FOR NEXT